ಅಮಿತ್ ಶಾ ದೇಶ ಭಕ್ತಿಯ ಗುತ್ತಿಗೆ ಹಿಡಿದಿದ್ದಾರ – ಮಲ್ಲಿಕಾರ್ಜುನ ಖರ್ಗೆ ಕಿಡಿ

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದೇಶ ಭಕ್ತಿಯ ಗುತ್ತಿಗೆ ಹಿಡಿದವರಂತೆ ವರ್ತಿಸುತ್ತಿದ್ದಾರೆ ಎಂದು ಎ.ಐ.ಸಿ.ಸಿ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ ಖರ್ಗೆ ಕಿಡಿಕಾರಿದ್ದಾರೆ. ಪೌರತ್ವ ಮಸೂದೆ ವಿರೋಧಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರ್ಗಿಗೆ ಆಗಮಿಸಿದ ಸಂದರ್ಭದಲ್ಲಿ ಮಾತನಾಡಿದ ಅವರು, ರಾಷ್ಟ್ರೀಯ ಪೌರತ್ವ ಮಸೂದೆ ವಿಷಯದಲ್ಲಿ ಗೊಂದಲ ಸುರಿಸುತ್ತಿರುವವರ ಪ್ರತಿಪಕ್ಷಗಳಲ್ಲ.

ಪ್ರಧಾನಿ ಮೋದಿ ಮತ್ತು ಅಮಿತ್ ಶಾ ಗೊಂದಲ ಸೃಷ್ಟಿಸುತ್ತಿದ್ದಾರೆ. ಆದರೆ ಅದನ್ನು ಪ್ರತಿಪಕ್ಷಗಳ ಮೇಲೆ ಹಾಕುತ್ತಿದ್ದಾರೆ. ಪೌರತ್ವ ಮಸೂದೆ ಈ ಹಿಂದೆ ಹಿಂದೆ 8 – 10 ಬಾರಿ ತಿದ್ದುಪಡಿಯಾಗಿದೆ ಆದರೆ ಯಾವ ಸಂದರ್ಭದಲ್ಲಿಯೂ ಈ ರೀತಿಯ ಗೊಂದಲ ಸೃಷ್ಟಿಯಾಗಿರಲಿಲ್ಲ. ಈ ಹಿಂದೆ ಯಾರಿಗೆ ಪೌರತ್ವ ಕೊಡಬೇಕಿತ್ತು ಅವರೆಲ್ಲರಿಗೂ ಕೊಟ್ಟಿದ್ದೇವೆ ಆದರೆ ಕೆಲವೊಂದು ಗೊಂದಲಕಾರಿ ಅಂಶಗಳನ್ನು ಹಾಕಿ ಜನರಿಗೆ ದಿಕ್ಕು ತಪ್ಪಿಸುವ ಕೆಲಸವನ್ನು ಪ್ರಧಾನಿ ಮಾಡುತ್ತಿದ್ದಾರೆ. ಪ್ರಧಾನಿ ಮೋದಿ ಮತ್ತು ಅಮಿತ್ ಶಾ ದೇಶಭಕ್ತಿಯ ಗುತ್ತಿಗೆ ಹಿಡಿದವರಂತೆ ವರ್ತಿಸುತ್ತಿದ್ದಾರೆ. ಮೋದಿ ಅಮಿತ್ ಶಾ ವಿರುದ್ಧ ಮಲ್ಲಿಕಾರ್ಜುನ ಖರ್ಗೆ ಕಿಡಿ ಕಾರಿದರು.

ಮಂಗಳೂರು ಬಾಂಬ್ ಪತ್ತೆ ಪ್ರಕರಣ ಪೊಲೀಸರು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮಲ್ಲಿಕಾರ್ಜುನ ಖರ್ಗೆ ಇದೇ ಸಂದರ್ಭದಲ್ಲಿ ಆಗ್ರಹಿಸಿದ್ದಾರೆ. ಸರ್ಕಾರ ತಕ್ಷಣ ತನಿಖಾ ಸಂಸ್ಥೆಗೆ ಸೂಕ್ತ ನಿರ್ದೇಶನ ನೀಡಬೇಕು ಯಾರೇ ತಪ್ಪಿತಸ್ಥರಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಬೇಕು. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತಾಗಬೇಕೆಂದಿದ್ದಾರೆ.

ನಾಲ್ವರು ಕಾರ್ಯಾಧ್ಯಕ್ಷರ ನೇಮಕ ಹೈಕಮಾಂಡ್ ಗೆ ಬಿಟ್ಟದ್ದು….
ಕೆಪಿಸಿಸಿ ಅಧ್ಯಕ್ಷರ ನೇಮಕ ವಿಳಂಬ ವಿಚಾರದ ಕುರಿತು ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ ಖರ್ಗೆ, ಈ ಕುರಿತು ಹೈಕಮಾಂಡ್ ಶೀಘ್ರ ನಿರ್ಧಾರ ಕೈಗೊಳ್ಳುತ್ತೆ ಎಂದಿದ್ದಾರೆ. ಕೆಪಿಸಿಸಿ ಅಧ್ಯಕ್ಷರ ನೇಮಕ ನಮಗೇನು ಅಷ್ಟು ಅವಸರವಿಲ್ಲ. ಆದರೆ ಮಾಧ್ಯಮಗಳಿಗೆ ಮತ್ತು ಪ್ರತಿಪಕ್ಷಗಳಿಗೆ ವರವಿದ್ದಂತೆ ಕಾಣುತ್ತಿದೆ. ಕೆಪಿಸಿಸಿ ಅಧ್ಯಕ್ಷರ ಆಯ್ಕೆ ವಿಚಾರಕ್ಕೆ ಸಂಬಂಧಿಸಿ ಈಗಾಗಲೇ ಚರ್ಚೆಗಳು ಪೂರ್ಣಗೊಂಡಿವೆ. ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ನಾಲ್ವರು ಕಾರ್ಯಾಧ್ಯಕ್ಷರ ನೇಮಕದ ಬಗ್ಗೆಯೂ ಪ್ರತಿಕ್ರಿಯಿಸಿದ ಖರ್ಗೆ, ಮಹಾರಾಷ್ಟ್ರದಲ್ಲಿ ಐವರು ಕಾರ್ಯಾಧ್ಯಕ್ಷರನ್ನು ನೇಮಕ ಮಾಡಲಾಗಿತ್ತು. ಕರ್ನಾಟಕದಲ್ಲಿಯೂ ಈ ಹಿಂದೆ ಇಬ್ಬರು ಕಾರ್ಯಾಧ್ಯಕ್ಷರ ನೇಮಕ ಮಾಡಲಾಗಿತ್ತು. ಸಂದರ್ಭಕ್ಕೆ ತಕ್ಕಂತೆ ಕಾರ್ಯಾಧ್ಯಕ್ಷರ ನೇಮಕ ಮಾಡಲಾಗುತ್ತದೆ. ಇದು ಪಕ್ಷದ ಆಂತರಿಕ ವಿಚಾರವಾಗಿದೆ. ಈ ಬಗ್ಗೆ ಕೆಲವು ನಾಯಕರಲ್ಲಿ ಭಿನ್ನ ನಿಲುವುಗಳಿರಬಹುದು ಆದರೆ ಎಲ್ಲರೂ ಪಕ್ಷದ ನಿರ್ಣಯಕ್ಕೆ ಬದ್ಧರಾಗಿರುತ್ತೇವೆ ಎಂದು ಕಲಬುರ್ಗಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಹೇಳಿಕೆ ನೀಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights