ಅಮೆರಿಕಾದಲ್ಲಿ ಮಹಾತ್ಮಗಾಂಧಿ ಪ್ರತಿಮೆಯನ್ನು ವಿರೂಪಗೊಳಿಸಿ ಅಪಮಾನವೆಸಗಿದ ದುಷ್ಕರ್ಮಿಗಳು

ಆಫ್ರಿಕಾ ಮೂಲದ ಅಮೆರಿಕನ್‌ ಪ್ರಜೆ ಕಪ್ಪು ವರ್ಣೀಯ ಜಾರ್ಜ್ ಫ್ಲಾಯ್ಡ್ ಹತ್ಯೆ ವಿರೋಧಿಸಿ ಅಮೆರಿಕ ರಾಷ್ಟ್ರದಾದ್ಯಂತ  ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಕಿಡಿಗೇಡಿಗಳು ಮಹಾತ್ಮ ಗಾಂಧಿ ಅವರ ಪ್ರತಿಮೆಯನ್ನು ವಿರೂಪಗೊಳಿಸಿ ಅಪಮಾನ ಮಾಡಿದ್ದಾರೆ ಎಂದು ಅಮೆರಿಕಾದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.

ಭಾರತೀಯ ರಾಯಭಾರಿ ಕಚೇರಿ ಬಳಿಯ ಉದ್ಯಾನವನದಲ್ಲಿ ಸ್ಥಾಪಿಸಲಾಗಿದ್ದ ಮಹಾತ್ಮ ಗಾಂಧಿ ಪ್ರತಿಮೆಯನ್ನು ಜೂನ್ 2 ಮತ್ತು ಜೂನ್ 3ರ ಮಧ್ಯರಾತ್ರಿ ಧ್ವಂಸಗೊಳಿಸಲಾಗಿದೆ. ಸ್ಥಳೀಯ ಕಾನೂನು ಜಾರಿ ಏಜೆನ್ಸಿಯಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳಿಂದ ದೂರು ದಾಖಲಿಸಲಾಗಿದೆ.

ಈ ಕೃತ್ಯ ಕುರಿತು ಪ್ರತಿಕ್ರಿಯಿಸಿರುವ ಟ್ರಂಪ್‌, ಇದು ಅಪಮಾನಕರ ಘಟನೆಯಾಗಿದೆ. ಈ ಬಗ್ಗೆ ತನಿಖೆ ನಡೆಸುತ್ತೇವೆ ಎಂದಿದ್ದಾರೆ.

US envoy to India apologises over desecration of Gandhi statue in ...

ದುಷ್ಕೃತ್ಯದ ಬಗ್ಗೆ ಶೀಘ್ರವಾಗಿ ತನಿಖೆ ನಡೆಸಬೇಕೆಂದು ಕೋರಿ ಅಮೆರಿಕಾದ ಸ್ಟೇಟ್ ಡಿಪಾರ್ಟ್ ಮೆಂಟ್, ಮೆಟ್ರೊಪಾಲಿಟಿನ್ ಪೊಲೀಸ್ ಮತ್ತು ನ್ಯಾಷನಲ್ ಪಾರ್ಕ್ ಸರ್ವಿಸ್ ನಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳು ದೂರು ಸಲ್ಲಿಸಿದ್ದಾರೆ.

ಅದೇ ಉದ್ಯಾನವನದಲ್ಲಿ ಪ್ರತಿಮೆ ಪುನರ್ ಸ್ಥಾಪಿಸುವ ನಿಟ್ಟಿನಲ್ಲಿ ಭಾರತೀಯ ರಾಯಭಾರಿ ಅಧಿಕಾರಿಗಳು ಮುಂದಾಗಿದ್ದಾರೆ.

ಶಾಂತಿಯುತ ಪ್ರತಿಭಟನೆ ಮೂಲಕ ಗಾಂಧಿ ಅತ್ಯುನ್ನತ ಬದಲಾವಣೆ ಮಾಡಿದ್ದಾರೆ. ಅಂತವರ ಪ್ರತಿಮೆ ವಿರೂಪಗೊಳಿಸುವುದು ನಾಚಿಗೇಡಿನ ಸಂಗತಿ ಎಂದು ಉತ್ತರ ಕಾರೊಲಿನಾ ಸೆನೆಟರ್ ಟಾಮ್ ಟಿಲ್ಲಿಸ್ ಹೇಳಿದ್ದಾರೆ.

ಈ ಘಟನೆ ಬಗ್ಗೆ ಭಾರತದಲ್ಲಿನ ಅಮೆರಿಕಾ ರಾಯಭಾರಿ ಕೇನ್ ಜಸ್ಟರ್ ಕ್ಷಮೆ ಕೋರಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights