ಎಲ್ಲಂದ್ರಲ್ಲಿ ಉಗುಳುವ ಅಭ್ಯಾಸವಿದ್ರೆ ದಂಡ ಕಟ್ಟಲು ರೆಡಿ ಇರಿ – ಶ್ರೀರಾಮುಲು

ಇನ್ಮುಂದು ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಂಡು ಬಂದರೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಉಗುಳುವುದು ಕಾನೂನು ಪ್ರಕಾರ ಅಪರಾಧವಾಗಿದ್ದು ಈ ರೀತಿ ನಡುವಳಿಕೆ ಕಂಡು ಬಂದಿರೆ ದಂಡ ವಿಧಿಸುವುದು ಮಾತ್ರವಲ್ಲದೇ, ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳುವುದಾಗಿ ಎಂದು ಸರ್ಕಾರ ಆದೇಶಿಸಿದೆ.

ಹೌದು… ಕೊರೊನಾ ಸೋಂಕು ರಾಜ್ಯದಲ್ಲಿ ಅಧಿಕವಾಗಿ ಹರಡುತ್ತಿರುವುದರಿಂದ ಕೆಲ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಹಾಗೂ ಉಗುಳುವುದು ಕಂಡು ಬಂದರೆ ಅಂತವರಿಗೆ ದಂಡದ ಜೊತೆ ಐಪಿಸಿ ಸೆಕ್ಷನ್  188, 268, 269, 270 ರ  ಅಡಿ ಕ್ರಮಕೈಗೊಳ್ಳಲಾಗುವುದು ಎಂದು  ಸಚಿವ ಶ್ರೀರಾಮುಲು ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಇಂದಿನಿಂದಲೇ ನಿಷೇಧವಾಗಲಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಸೇವನೆ ಮಾಡಿದ್ರೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದ್ದು, ಐಪಿಸಿ ಸೆಕ್ಷನ್ ಅಡಿ ಕೇಸ್ ದಾಖಲು ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದ್ದಾರೆ.

ವಿಶ್ವ ತಂಬಾಕು ರಹಿತ ದಿನಾಚರಣೆಯಾದ ಇಂದು ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕು ಜಗಿಯುವುದು, ಉಗುಳುವುದನು ನಿಷೇಧಗೊಳಿಸಿ ಆದೇಶ ಮಾಡಲಾಗಿದೆ ಎಂದು ಸಚಿವ ಶ್ರೀರಾಮುಲು ಘೋಷಣೆ ಮಾಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights