ಟಿವಿ, ಇಂಟರ್ನೆಟ್, ಸ್ಮಾರ್ಟ್‌ಫೋನ್ ಇಲ್ಲದ ವಿದ್ಯಾರ್ಥಿಗಳಿಗೆ ಕೇರಳ ಸರ್ಕಾರದಿಂದ ಶಿಕ್ಷಣ ಯೋಜನೆ

ಕೋವಿಡ್-19 ಪ್ರೇರಿತ ಲಾಕ್‌ಡೌನ್ ಕಾರಣದಿಂದಾಗಿ ಪಾಠಗಳನ್ನು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುವ ಉದ್ದೇಶದಿಂದ ಕೇರಳದಲ್ಲಿ ಕನಿಷ್ಠ 45 ಲಕ್ಷ ವಿದ್ಯಾರ್ಥಿಗಳು ಸೋಮವಾರ ಹೊಸ ಶೈಕ್ಷಣಿಕ ವರ್ಷದ ಆರಂಭದಲ್ಲಿ ರಾಜ್ಯ ಶಿಕ್ಷಣ ಇಲಾಖೆ ಆಯೋಜಿಸಿದ್ದ ವರ್ಚುವಲ್ ತರಗತಿಗಳಿಗೆ ಹಾಜರಾಗಲು ತಿಳಿಸಿದೆ.

1 ರಿಂದ 12 ನೇ ತರಗತಿಗಳಿಗೆ ವಾರದ ದಿನಗಳಲ್ಲಿ ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ರಾಜ್ಯ ಸಾಮಾನ್ಯ ಶಿಕ್ಷಣ ಇಲಾಖೆಯ ಅಧೀನದಲ್ಲಿರುವ ವಿಕ್ಟರ್ಸ್ ಚಾನೆಲ್ ಮೂಲಕ ‘ಫಸ್ಟ್ ಬೆಲ್’ ಹೆಸರಿನ ಆನ್‌ಲೈನ್ ಸೆಷನ್‌ಗಳನ್ನು ಪ್ರಸಾರ ಮಾಡಲಾಗುತ್ತದೆ. ಇದು ಚಾನೆಲ್ ಕೇಬಲ್ ನೆಟ್‌ವರ್ಕ್‌ಗಳಲ್ಲಿ ನೇರವಾಗಿ ಮನೆಗೆ ಲಭ್ಯವಿದೆ. ಜೊತೆಗೆ ಕೇರಳ ಮೂಲಸೌಕರ್ಯ ಮತ್ತು ತಂತ್ರಜ್ಞಾನ ಶಿಕ್ಷಣ (ಕೈಟ್) ತರಗತಿಗಳನ್ನು ನಡೆಸಲು ಒಂದು ವೇಳಾಪಟ್ಟಿಯನ್ನು ನಿಗದಿಪಡಿಸಿದೆ.

ಚಾನೆಲ್‌ನಲ್ಲಿ 11 ನೇ ತರಗತಿ ಹೊರತುಪಡಿಸಿ 1 ರಿಂದ 12 ರವರೆಗೆ ಎಲ್ಲಾ ತರಗತಿಗಳಿಗೆ ಸೋಮವಾರದಿಂದ ಶುಕ್ರವಾರದವರೆಗೆ ಬೆಳಿಗ್ಗೆ 8.30 ರಿಂದ ಸಂಜೆ 5.30 ರವರೆಗೆ ಪಾಠಗಳು ನಡೆಯಲಿವೆ. ವಿವಿಧ ತರಗತಿಗಳ ಸಮಯ ಸ್ಲಾಟ್‌ಗಳು ಅರ್ಧ-ಗಂಟೆಯಿಂದ ಎರಡು ಗಂಟೆಗಳವರೆಗೆ ಬದಲಾಗುತ್ತವೆ ಎಂದು ಕೈಟ್ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆ ತಿಳಿಸಿದೆ.

ಆದಾಗ್ಯೂ,  2.6 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಆನ್‌ಲೈನ್ ತರಗತಿಗಳಿಗೆ ಯಾವುದೇ ಸೌಲಭ್ಯಗಳಿಲ್ಲ. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ 43.76 ಲಕ್ಷ ವಿದ್ಯಾರ್ಥಿಗಳಿಂದ ಈ ಡೇಟಾವನ್ನು ಸಂಗ್ರಹಿಸಲಾಗಿದೆ.

ಆನ್‌ಲೈನ್ ತರಗತಿಗಳಿಗೆ ಹಾಜರಾಗಲು ಸಂಪನ್ಮೂಲಗಳಿಲ್ಲದ ಕಾರಣ ಮಂಗಳವಾರ 10 ನೇ ತರಗತಿಯ ವಿದ್ಯಾರ್ಥಿನಿ ಆತ್ಮಹತ್ಯೆಯಿಂದ ಸಾವನ್ನಪ್ಪಿದ್ದಾಳೆ  ಎಂದು ಎನ್‌ಡಿಟಿವಿ ವರದಿ ಮಾಡಿದೆ. ಕೇರಳದ ಶಿಕ್ಷಣ ಸಚಿವ ಸಿ.ರವೀಂದ್ರನಾಥ್ ಅವರು ಘಟನೆಯ ಬಗ್ಗೆ ವರದಿ ಕೇಳಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights