ರಾಜ್ಯದಲ್ಲಿ ಹೊಸದಾಗಿ 6 ಕೊರೊನಾ ಪ್ರಕರಣ, ಓರ್ವ ಸಾವು – ಶ್ರೀರಾಮುಲು ಟ್ವೀಟ್

ರಾಜ್ಯದಲ್ಲಿ ಕೊರೊನಾ ಸಂಖ್ಯೆ ದಿನನಿತ್ಯ ಹೆಚ್ಚಾಗುತ್ತಿದ್ದು ಜನರಲ್ಲಿ ಆತಂಕ ಹೆಚ್ಚಿಸುತ್ತಲೇ ಇಂದು ಕಲಬುರ್ಗಿಯ ಮತ್ತೋರ್ವ ವ್ಯಕ್ತಿ ಬಲಿಯಾಗಿದ್ದು ಹೊಸದಾಗಿ 6 ಪ್ರಕರಣಗಳು ಪತ್ತೆಯಾಗಿವೆ.

ಹೌದು… ರಾಜ್ಯದಲ್ಲಿ ಕೋವಿಡ್-19 ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಕಲಬುರಗಿಯ 65 ವರ್ಷದ ಸೋಂಕಿತ ವ್ಯಕ್ತಿಯೋರ್ವರು ಬಲಿಯಾಗಿದ್ದಾರೆ. ಈ ಮುಂಚೆ ದೇಶದಲ್ಲಿ ಹಾಗೂ ರಾಜ್ಯದಲ್ಲಿ ಮೊದಲ ವ್ಯಕ್ತಿ ಎನ್ನಲಾದ ಕಲಬುರಗಿಯಲ್ಲಿನ ವೃದ್ಧ ಕೊರೊನಾ ಸೋಂಕಿನಿಂದ ಸಾವನ್ನಪ್ಪಿದ್ದರು. ಸದ್ಯ ಮತ್ತೋರ್ವ ಸೋಂಕಿನಿಂದ ಸಾವನ್ನಪ್ಪಿದ್ದು ಗುಲ್ಬರ್ಗದಲ್ಲಿ ಆತಂಕ ಹೆಚ್ಚಾಗಿದೆ.

ಕಲಬುರಗಿಯಲ್ಲಿ 65 ವರ್ಷದ ವ್ಯಕ್ತಿ ಸೋಂಕಿನಿಂದ ಸಾವನ್ನಪ್ಪಿದ್ದು ಇದು ಕಲಬುರಗಿಯಲ್ಲಿ ಎರಡನೇ ಸಾವಾಗಿದೆ. ಜೊತೆಗೆ ಇಂದು ರಾಜ್ಯದಲ್ಲಿ ಹೊಸದಾಗಿ ಆರು ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 181 ಕ್ಕೆ ಏರಿಕೆಯಾಗಿದೆ. ಮಂಡ್ಯ, ಚಿಕ್ಕಬಳ್ಳಾಪುರ, ಬೆಂಗಳೂರು, ಉತ್ತರ ಕನ್ನಡ ತಲಾ ಒಂದು ಪ್ರಕರಣ ದಾಖಲಾಗಿದ್ದು, ಕಲಬುರಗಿಯಲ್ಲಿ ಎರಡು ಪ್ರಕರಣಗಳು ಪತ್ತೆಯಾಗಿವೆ. ಆದರೆ ಕಲಬುರಗಿಯಲ್ಲಿ ಮೃತಪಟ್ಟ ವ್ಯಕ್ತಿಗೆ ಸೋಂಕು ಹೇಗೆ ತಗುಲಿದೆ ಎನ್ನುವುದು ಮಾತ್ರ ಪತ್ತೆಯಾಗಿಲ್ಲ. ಈ ಬಗ್ಗೆ ಟ್ವೀಟ್ ಮಾಡಿರುವ ಆರೋಗ್ಯ ಸಚಿವ ಶ್ರೀರಾಮುಲು, ಕರ್ನಾಟಕದಲ್ಲಿ ನಿನ್ನೆಯಿಂದ ಇಂದು ಮಧ್ಯಾಹ್ನದವರೆಗೆ 6 ಹೊಸ  ಪ್ರಕರಣಗಳು ಖಚಿತವಾಗಿದ್ದು, ಒಟ್ಟಾರೆ 181ಕ್ಕೆ   ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಇಂದಿನವರಗೆರೆ 28 ಜನರನ್ನು ಸಂಪೂರ್ಣ ಜನರನ್ನು ಗುಣಮುಖರನ್ನಾಗಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದೆ.

ಗೌರಿಬಿದನೂರಿನಲ್ಲಿ ಮತ್ತೊಂದು ಪಾಸಿಟಿವ್ ಬಂದಿದ್ದು ಈ ಮೂಲಕ ಚಿಕ್ಕಬಳ್ಳಾಪುರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 8ಕ್ಕೆ ಏರಿಕೆಯಾಗಿದೆ. 23 ವರ್ಷದ ಯುವಕ ದೆಹಲಿಯ ನಿಜಾಮುದ್ದೀನ್ ಜಮಾತ್ ಗೆ ಹೋಗಿಬಂದಿದ್ದ. ಈಗ ಯುವಕನ ತಾಯಿ, ಯುವಕನ ಅಕ್ಕ ಭಾವ ಇಬ್ಬರು ಮಕ್ಕಳನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ.ಒಟ್ಟಿನಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಛಾಗುತ್ತಲೇ ಇದ್ದು ಲಾಕ್ ಡೌನ್ ನಂತರದ ದಿನಗಳನ್ನು ಕಲ್ಪಿಸಿಕೊಳ್ಳಲೂ ಆತಂಕ ಶೂರುವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights