ಸಿಎಂ ಯಡಿಯೂರಪ್ಪ ಆಡಿಯೋ ಪ್ರಕರಣ : ಶಾ ಖಡಕ್ ಸಂದೇಶಕ್ಕೆ ಬಿಜೆಪಿ ನಾಯಕರಲ್ಲಿ ತಳಮಳ

ರಾಜ್ಯ ರಾಜಕಾರಣದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸಿಎಂ ಯಡಿಯೂರಪ್ಪನವರ ಆಡಿಯೋ ಸಂಚಲನ ಸೃಷ್ಟಿಸಿದೆ. ಈ ಬಗ್ಗೆ ರಾಜ್ಯದ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಯಡಿಯೂರಪ್ಪ ಅವರಿಂದ ಮಾಹಿತಿ ಪಡೆದುಕೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಖಡಕ್ ಸೂಚನೆಯನ್ನು ರವಾನಿಸಿದ್ದಾರೆ. ಶಾ ಸಂದೇಶ ನೋಡಿ ರಾಜ್ಯ ಬಿಜೆಪಿ ನಾಯಕರು ಗೊಂದಲಕ್ಕೊಳಗಾಗಿದ್ದಾರೆ ಎಂದು ತಿಳಿದು ಬಂದಿದೆ.

ಆಡಿಯೋಗೆ ಸಂಬಂಧಿಸಿದಂತೆ ಪಕ್ಷದಲ್ಲಿ ರಹಸ್ಯವಾಗಿ ಆಂತರಿಕ ತನಿಖೆ ನಡೆಸಿ ರೆಕಾರ್ಡ್ ಮಾಡಿದವರ ಹೆಸರು ಬಹಿರಂಗ ಪಡಿಸಬೇಡಿ. ಸದ್ಯ ಆಡಿಯೋ-ವಿಡಿಯೋ ಮಾಡಿದವರ ಹೆಸರು ಬಹಿರಂಗಪಡಿಸಲು ಸೂಕ್ತ ಸಮಯ ಇಲ್ಲ. ತನಿಖೆ ಪೂರ್ಣಗೊಂಡ ನಂತರ ವರದಿಯನ್ನು ಕಳುಹಿಸಬೇಕು ಮತ್ತು ತಪ್ಪಿತಸ್ಥರ ಹೆಸರು ಎಲ್ಲಿಯೂ ಲೀಕ್ ಆಗದಂತೆ ನೋಡಿಕೊಳ್ಳಬೇಕು.

ಮುಂದಿನ ದಿನಗಳಲ್ಲಿ ತಪ್ಪಿತಸ್ಥರ ವಿರುದ್ಧ ನಾವೇ ಸೂಕ್ತ ಕ್ರಮಕೈಗೊಳ್ಳುತ್ತೇವೆ. ಎಲ್ಲರೂ ಉಪಚುನಾವಣೆಯತ್ತ ಗಮನ ಕೊಡಿ ಅಮಿತ್ ಶಾ ಸಂದೇಶವನ್ನು ರವಾನಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights