4ನೇ ಹಂತದ ಲಾಕ್‌ಡೌನ್‌ನಲ್ಲಿ ಬಸ್‌ ಹಾಗೂ ವಿಮಾನ ಸಂಚಾರಕ್ಕೆ ಅವಕಾಶ?

ನಾಲ್ಕನೇ ಹಂತದ ಲಾಕ್‌ಡೌನ್‌ ಮೇ 18ರಿಂದ ಆರಂಭವಾಗಲಿದೆ. ಈ ಅವಧಿಯಲ್ಲಿ ಆಯ್ದ ಕೆಲವು ಪ್ರದೇಶಗಳಿಗೆ ವಿಮಾನ ಹಾಗೂ ಬಸ್‌ ಸಂಚಾರ ಸೌಲಭ್ಯ ಒದಗಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.

ಈ ವಾರದ ಆರಂಭದಲ್ಲಿ ಮೋದಿ ಕೋರಿರುವ ರಾಜ್ಯಗಳ ನೀಲನಕ್ಷೆ ಹಾಗೂ ಅದು ಪರಿಸ್ಥಿತಿಗೆ ಹೇಗೆ ಹೊಂದಿಕೊಳ್ಳಲಿದೆ ಎಂಬುದರ ಆಧಾರದ ಮೇಲೆ ಪ್ರದೇಶಗಳನ್ನು ಆಯ್ಕೆ ನಡೆಯಲಿದೆ ಎಂದು  ಲಾಕ್‌ಡೌನ್ 4.0 ಮಾರ್ಗಸೂಚಿಗಳನ್ನು ರೂಪಿಸುವಲ್ಲಿ ತೊಡಗಿರುವ  ಗೃಹ ಸಚಿವಾಲಯದ ಅಧಿಕಾರಿಗಳು ತಿಳಿಸಿರುವುದಾಗಿ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ಮೇ 12 ರಂದು ನಡೆದ ಮೋದಿ ಮತ್ತು ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಸಂವಾದದಲ್ಲಿ ಹಾಟ್‌ಸ್ಪಾಟ್‌ಗಳನ್ನು ಗುರುತಿಸುವ ಮತ್ತು ನಿರ್ಧರಿಸುವ ಅಧಿಕಾರವನ್ನು ರಾಜ್ಯ ಸರ್ಕಾರಕ್ಕೆ ನೀಡಬೇಕು. ಹೆಚ್ಚು ಸೋಂಕಿತರಿರುವ ಪ್ರದೇಶವನ್ನು ಗುರುತಿಸಿ ಉಳಿದ ಭಾಗಗಳಲ್ಲಿ ಲಾಕ್‌ಡೌನ್ ಸಡಿಸಿ ಆರ್ಥಿಕ ಚಟುವಟಿಕೆಗಳನ್ನು ಪುನರಾರಂಭಿಸುತ್ತೇವೆ. ಇಲ್ಲವಾದರೆ ರಾಜ್ಯದ ಆರ್ಥಿಕತೆ ಅಧೋಗತಿಗೆ ಇಳಿಯುತ್ತದೆ ಎಂದು ಹಲವು ರಾಜ್ಯಗಳ ಮುಖ್ಯಮಂತ್ರಿಗಳು ಒತ್ತಾಯಿಸಿದ್ದರು.

ಮುಖ್ಯಮಂತ್ರಿಗಳ ಒತ್ತಾಯಕ್ಕೆ ಒಕ್ಕೂಟ ಸರ್ಕಾರ ಅನುಮತಿ ನೀಡುವ ಸಾಧ್ಯತೆ ಇದೆ. ಅಲ್ಲದೆ, ಮೋದಿಯವರು 4ನೇ ಹಂತದ ಲಾಕ್‌ಡೌನ್‌ ಸಂಪೂರ್ಣವಾಗಿ ವಿಭಿನ್ನವಾಗಿರಲಿದೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದಾರೆ

ಹಾಟ್‌ಸ್ಪಾಟ್‌ಗಳಲ್ಲದ ಪ್ರದೇಶಗಳಲ್ಲಿ ನಿಗದಿತ ಪ್ರಯಾಣಿಕರೊಂದಿಗೆ ಬಸ್‌ಗಳು ಕಾರ್ಯಾರಂಭ ಮಾಡಲಿವೆ. ಪ್ರಯಾಣಿಕರ ಸಂಖ್ಯೆ ನಿರ್ಬಂಧದೊಂದಿಗೆ ಆಟೋ, ಟ್ಯಾಕ್ಸಿಗಳಿಗೆ ಅವಕಾಶ ನೀಡಲಾಗುವುದು ಎಂದು ಅಧಿಕಾರಿಗಳು ವಿವರಿಸಿದ್ದಾರೆ.

ಪ್ರಯಾಣದ ಪಾಸುಗಳನ್ನು ಹೊಂದಿರುವರಿಗೆ ಅಂತರ ರಾಜ್ಯ ಭೇಟಿಗೂ ಅವಕಾಶ ನೀಡುವ ಸಾಧ್ಯತೆ ಇದೆ. ಮುಂದಿನ ವಾರದಿಂದ ದೇಶಿಯ ಕ್ಷೇತ್ರದವರಿಗಾಗಿ ವಿಮಾನ ಸಂಚಾರ ಆರಂಭಿಸಲು ಸರ್ಕಾರ ಯೋಜಿಸುತ್ತಿದೆ. ರೈಲು ಸೇವೆ ಈಗಾಗಲೇ ಆರಂಭವಾಗಿದೆ. ಅವಶ್ಯಕ ವಸ್ತುಗಳಲ್ಲದೇ ಇತರ ಎಲ್ಲಾ ವಸ್ತುಗಳ ಹೋಮ್ ಡೆಲಿವರಿಗೆ ಅನುಮತಿ ನೀಡುವ ಸಾಧ್ಯತೆ ಇದೆ ಎಂದು ಅವರು ಹೇಳಿದ್ದಾರೆ.

ಕೊರೋನಾವೈರಸ್ ತಡೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವುದಾಗಿ ಎಲ್ಲಾ ರಾಜ್ಯಗಳು ಹೇಳಿದ್ದು,ಕಂಟೈನ್ ಮೆಂಟ್ ವಲಯಗಳಲ್ಲಿ ಯಾವುದೇ ಚಟುವಟಿಕೆಗಳಲ್ಲಿ ಅವಕಾಶ ನೀಡುವುದಿಲ್ಲ ಎಂದು ತಿಳಿಸಿವೆ. ಮಹಾರಾಷ್ಟ್ರದಲ್ಲಿ ಹೆಚ್ಚಿನ ಸಂಖ್ಯೆಯ ಸೋಂಕು ಕಂಡುಬಂದಿದ್ದು, ಲಾಕ್ ಡೌನ್ ವಿಸ್ತರಣೆಗೆ ಯೋಜಿಸಿದ್ದಾರೆ ಎಂದು ಮತ್ತೋರ್ವ ಅಧಿಕಾರಿ ತಿಳಿಸಿದ್ದಾರೆ.

ಗುಜರಾತ್ ಎರಡನೇ ಸ್ಥಾನದಲ್ಲಿದ್ದು, ಎಲ್ಲ ನಗರಗಳಲ್ಲಿ ಆರ್ಥಿಕ ಚಟುವಟಿಕೆಗಳು ಪುನರ್ ಆರಂಭಗೊಂಡಿವೆ. ಅನೇಕ ಕ್ಷೇತ್ರಗಳನ್ನು ಓಪನ್ ಮಾಡುವಂತೆ ಆಂಧ್ರಪ್ರದೇಶ , ಕೇರಳ, ಕರ್ನಾಟಕ, ಗುಜರಾತ್ ಮತ್ತು ದೆಹಲಿ ರಾಜ್ಯಗಳು ಸಲಹೆ ನೀಡಿವೆ. ಪ್ರವಾಸೋದ್ಯಮ ಕ್ಷೇತ್ರವನ್ನು ಪುನರುಜ್ಜೀವನಗೊಳಿಸಲು ಮೆಟ್ರೋ ಸೇವೆಗಳು, ಸ್ಥಳೀಯ ರೈಲುಗಳು, ದೇಶೀಯ ವಿಮಾನಗಳು, ರೆಸ್ಟೋರೆಂಟ್‌ಗಳು ಮತ್ತು ಹೋಟೆಲ್‌ಗಳನ್ನು ಪುನರಾರಂಭಿಸಲು ಕೇರಳ ಬಯಸಿದೆ. ಬಿಹಾರ, ಜಾರ್ಖಂಡ್, ಒಡಿಶಾ ರಾಜ್ಯಗಳು ಕಠಿಣ ಲಾಕ್ ಡೌನ್ ಮುಂದುವರಿಕೆಗ ಒತ್ತಾಯಿಸಿವೆ ಎಂದು ಅವರು ತಿಳಿಸಿದ್ದಾರೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights