Shocking: ಹೊಸ ಎರಡು ಲಕ್ಷಣಗಳೂ ಕೊರೊನಾ ಸೋಂಕಿನ ಲಕ್ಷಣಗಳಾಗಿವೆ!

ದೇಶಾದ್ಯಂತ ಕೊರೊನಾ ಸೋಂಕಿನ ಹಾವಳಿ ದಿನೇ ದಿನೇ ಹೆಚ್ಚುತ್ತಲೇ ಇದೆ. ಕೊರೊನಾ ಸೋಂಕಿನ ವಿವಿಧ ಲಕ್ಷಣಗಳನ್ನು ವೈದ್ಯರು ಸ್ಪಷ್ಟಪಡಿಸಿದ್ದಾರೆ. ಆದರೆ, ಈಗ ಮತ್ತೆರಡು ಲಕ್ಷಣಗಳು ಕೊರೊನಾ ಸೋಂಕಿನ ಲಕ್ಷಣಗಳಾಗಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಇದ್ದಕ್ಕಿದ್ದಂತೆ ವಾಸನೆ, ರುಚಿ ಗ್ರಹಣ ಶಕ್ತಿ ನಷ್ಟವಾಗುವುದೂ ಕೂಡ ಕೊರೊನಾ ಸೋಂಕಿನ  ಲಕ್ಷಣವಾಗಿರಬಹುದು ಎಂದು ತಿಳಿಸಲಾಗಿದ್ದು, ಕೊರೊನಾ ರೋಗ ಲಕ್ಷಣಗಳ ಪಟ್ಟಿಗೆ ಸೇರಿಸಲಾಗಿದೆ.

Loss of smell and taste most common symptoms in Covid 19 patients ...

‘ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿರುವ ಅನೇಕ ರೋಗಿಗಳು, ಜ್ವರ, ಕೆಮ್ಮು, ಆಯಾಸ, ಉಸಿರಾಟದ ತೊಂದರೆ ಮುಂತಾದ ಸಮಸ್ಯೆಗಳ ಜೊತೆಗೆ ವಾಸನೆ ಹಾಗೂ ರುಚಿ ಗ್ರಹಣ ನಷ್ಟವಾಗಿರುವ ಬಗ್ಗೆಯೂ ಹೇಳಿಕೊಂಡಿದ್ದಾರೆ’ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಕೊರೋನಾ ಸೋಂಕಿತ ವ್ಯಕ್ತಿ ಸೀನುವಾಗ, ಕೆಮ್ಮುವಾಗ ಅಥವಾ ಮಾತನಾಡುವಾಗ ಹೊರ ಬರುವ ದ್ರವಾಂಶ (ಡ್ರಾಪ್ ಲೆಟ್ಸ್)ಗಳಿಂದಲೇ ಹೆಚ್ಚಾಗಿ ಸೋಂಕು ವ್ಯಾಪಿಸುವ ಸಾಧ್ಯತೆ ಇದ್ದು, ಈ ಡ್ರಾಪ್ ಲೇಟ್ ಗಳಿಲ್ಲಿನ ವೈರಸ್ ಪರಿಸರದಲ್ಲಿ ಹೆಚ್ಚು ಹೊತ್ತು ಇರಲಿದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights