ಕುಖ್ಯಾತ ರೌಡಿಶೀಟರ್ ವಿಕಾಸ್ ದುಬೆ ಪೊಲೀಸರ ಎನ್‌ಕೌಂಟರ್‌ಗೆ ಬಲಿ!

ಉತ್ತರ ಪ್ರದೇಶದ ಕಾನ್ಪುರದಲ್ಲಿ ಎಂಟು ಮಂದಿ ಪೊಲೀಸರನ್ನು ಹತ್ಯೆ ಮಾಡಿ, ಪರಾರಿಯಾಗಿದ್ದ ರೌಡಿಶೀಟರ್‌ ವಿಕಾಸ್ ದುಬೆ ಕಾನ್ಪುರ ಪೊಲೀಸರು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ್ದಾರೆ.

ಎಸ್ಕೇಪ್‌ ಆಗಿದ್ದ ವಿಕಾಸ್ ದುಬೆಯನ್ನು ಮಧ್ಯಪ್ರದೇಶದ ಉಜ್ಜಯನಿಯಲ್ಲಿ ಪೊಲೀಸರು ಬಂಧಿಸಿದ್ದರು. ಆತನನ್ನು ಉತ್ತರ ಪ್ರದೇಶದ ಪೊಲೀಸರಿಗೆ ಹಸ್ತಾಂತರಿಸಿದ್ದು, ಕಾನ್ಪುರಕ್ಕೆ ತೆರಳುತ್ತಿದ್ದ ವೇಳೆ ಪೊಲೀಸರ ಬೆಂಗಾವಲು ವಾಹನ ಅಪಘಾತಕ್ಕೀಡಾಗಿದ್ದು, ಆ ಸಂದರ್ಭದಲ್ಲಿ ಎಸ್ಕೇಪ್‌ ಆಗುಲು ಮುಂದಾದ ವಿಕಾಸ್‌ ದುಬೆಯನ್ನು ಎನ್‌ಕೌಂಟರ್‌ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಪೊಲೀಸರು ತಿಳಿಸಿದ್ದಾರೆ.

ಮಳೆಯಿಂದ ತೊಯ್ದಿದ್ದ ರಸ್ತೆಯಲ್ಲಿ ವಾಹನ ಪಲ್ಟಿಯಾಯಿತು. ಈ ವೇಳೆ ಜೊತೆಗಿದ್ದ ಪೊಲೀಸರಿಂದ ರಿವಲ್ವಾರ್ ಕಸಿದು ವಿಕಾಸ್ ದುಬೆ ಪರಾರಿಯಾಗಲು ಯತ್ನಿಸಿದ್ದ. ಆ ಕ್ಷಣದಲ್ಲಿ ಪೊಲೀಸರು ಗುಂಡು ಹಾರಿಸಿದ್ದಾರೆ.  ಗುಂಡೇಟಿಗೆ ವಿಕಾಸ್‌ ದುಬೆ ಮೃತಪಟ್ಟಿದ್ದಾನೆ ಎಂದು ಕಾನ್ಪುರ ಐಜಿ ಮೋಹಿತ್‌ ಅಗರ್ವಾಲ್‌ ಹೇಳಿದ್ದಾರೆ.


ಇದನ್ನೂ ಓದಿ08 ಮಂದಿ ಪೊಲೀಸರನ್ನು ಹತ್ಯೆ ಮಾಡಿದ್ದ ರೌಡಿ ವಿಕಾಶ್‌ ದುಬೆ ಆಪ್ತ ಎನ್‌ಕೌಂಟರ್‌ಗೆ ಬಲಿ!

Leave a Reply

Your email address will not be published. Required fields are marked *