ಕೊರೊನಾ – ಲಾಕ್‌ಡೌನ್‌ ಬಗ್ಗೆ ವೈದ್ಯರೊಂದಿಗೆ ಯಡಿಯೂರಪ್ಪ ಸಭೆ: ಚರ್ಚೆಯ 10 ಮುಖ್ಯಾಂಶಗಳು!

ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ವುತ್ತಿರುವ ಹಿನ್ನೆಲೆಯಲ್ಲಿ, ಸೋಂಕಿನ ಹರಡುವಿಕೆಯನ್ನು ನಿಯಂತ್ರಿಸಲು‌ ಕೈಗೊಳ್ಳಬೇಕಾದ ತುರ್ತು ಕ್ರಮಗಳ ಬಗ್ಗೆ ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ವೈದ್ಯಕೀಯ ತಜ್ಞರೊಂದಿಗೆ ಚರ್ಚೆ ನಡೆಸಿದರು.

ಸಭೆಯಲ್ಲಿ ಚರ್ಚೆಯಾದ ಪ್ರಮುಖಾಂಶಗಳು

  • ಕೋವಿಡ್ ಚಿಕಿತ್ಸೆಗೆ ಹಾಗೂ ನಿರ್ವಹಣೆಗೆ ಅಳವಡಿಸಬೇಕಾದ ಮಾರ್ಗಸೂಚಿಗಳನ್ನು ನಿಗದಿಪಡಿಸುವುದು
  • ರೋಗ ಲಕ್ಷಣ ಇಲ್ಲದ ಅಥವಾ ಅತ್ಯಂತ ಕಡಿಮೆ ಜ್ವರದ ಲಕ್ಷಣಗಳಿದ್ದರೆ, ಅವರನ್ನು ಮನೆಯಲ್ಲಿಯೇ ಪ್ರತ್ಯೇಕವಾಗಿರಿಸಿ (ಹೋಮ್ ಐಸೋಲೇಷನ್), ಅವರ ಆರೋಗ್ಯದ ಮೇಲೆ ನಿಗಾ ಇಡುವುದು. ಇದರಿಂದ ಆಸ್ಪತ್ರೆಗಳ ಮೇಲೆ ಒತ್ತಡ ಕಡಿಮೆ ಮಾಡುವುದು.
  • ತೀವ್ರ ಸೋಂಕಿನ ಲಕ್ಷಣಗಳು ಹೊಂದಿರುವವರು ಹಾಗೂ ಇತರ ಆರೋಗ್ಯ ಸಮಸ್ಯೆಗಳಿರುವವರು ಸೋಂಕಿತರಾದಲ್ಲಿ, ಅವರಿಗೆ ಉತ್ತಮ ಚಿಕಿತ್ಸೆ ನೀಡಲು ಆದ್ಯತೆ ನೀಡುವುದು
  • ಪ್ರಕರಣ ದ್ವಿಗುಣಗೊಳ್ಳುವ ವೇಗ ತಗ್ಗಿಸಬೇಕು. ಮುಚ್ಚಿದ ಸ್ಥಳಗಳು, ನಿಕಟ ಸಂಪರ್ಕ ಹಾಗೂ ಜನಸಂದಣಿಯ ಸ್ಥಳಗಳಲ್ಲಿ ಜನತೆ ಹೆಚ್ಚಿನ ಮುನ್ನೆಚ್ಚರಿಕೆ ವಹಿಸುವುದು
  • ಟೆಲಿ ಮೆಡಿಸಿನ್ ವ್ಯವಸ್ಥೆಯ ಮೂಲಕ ಹೆಚ್ಚಿನ ರೋಗಿಗಳಿಗೆ ಚಿಕಿತ್ಸೆ ನೀಡುವುದು
  • ಕ್ಷೇತ್ರದಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಅಗತ್ಯವಿದೆ. ಸಂಪರ್ಕ ಪತ್ತೆ ಹಚ್ಚಲು ಹೆಚ್ಚುವರಿ ಮಾನವ ಸಂಪನ್ಮೂಲ ಅಗತ್ಯವಿದ್ದು, ಇತರ ಇಲಾಖೆಯ ಸಿಬ್ಬಂದಿ ಸೇವೆ ಬಳಸಿಕೊಳ್ಳುವುದು
  • ಟೆಲಿ ಐಸಿಯು ಹಾಗೂ ಚಿಕಿತ್ಸೆಯ ನಿಗದಿತ ಮಾನದಂಡಗಳ ಕುರಿತು ಹೆಚ್ಚಿನ ತರಬೇತಿ ನೀಡುವುದು
  • ಆಸ್ಪತ್ರೆಗಳಿಗೆ ಆಮ್ಲಜನಕ ಪೂರೈಕೆ ಸರಪಣಿ ಹಾಗೂ ಹೊಸ ಔಷಧಿಗಳ ಪೂರೈಕೆ ಸರಪಣಿ ಅಬಾಧಿತವಾಗಿರಬೇಕು
  • ರಾಜ್ಯದಲ್ಲಿ ಕೋವಿಡ್ ಕುರಿತು ಭೀತಿಯ ವಾತಾವರಣ ಸೃಷ್ಟಿಯಾಗಿದ್ದು, ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸವಾಗಬೇಕಿದೆ
  • ತಜ್ಞರ ಈ ಅಭಿಪ್ರಾಯಗಳ ಕುರಿತು ಸರ್ಕಾರದ ಹಂತದಲ್ಲಿ ವಿವರವಾಗಿ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು.
ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights