‘ಕೊರೋನಾ ನಿಯಂತ್ರಣ ನಮ್ಮ ಕೈಯಲ್ಲಿ ಇಲ್ಲ’ – ಆರೋಗ್ಯ ಸಚಿವ ಸ್ಪಷ್ಟನೆ

ಮುಖ್ಯಮಂತ್ರಿ ಅವರ ಜತೆ ನಾವೆಲ್ಲರೂ ಹಗಲಿರುಳೂ ಕೆಲಸ ಮಾಡುತ್ತಿದ್ದೇವೆ. ‘ದೇವರ ಕೃಪೆಯೂ ನಮ್ಮೆಲ್ಲರ ಮೇಲಿರಬೇಕು’ ಎಂಬ ಮಾತನ್ನು ಸಾಮಾನ್ಯ ಅರ್ಥದಲ್ಲಿ ಹೇಳಿದ್ದೇನೆಯೇ ಹೊರತು, ಹತಾಶೆಯಿಂದಲ್ಲ ಎಂದು ಆರೋಗ್ಯ ಸಚಿವ ಶ್ರೀರಾಮುಲು ಸ್ಪಷ್ಟೀಕರಣ ನೀಡಿದ್ದಾರೆ.

ರಾಜ್ಯದಲ್ಲಿ‌ ದಿನೇ ದಿನೇ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದ್ದು, ಕೊರೋನಾ ನಿಯಂತ್ರಣದಲ್ಲಿ ರಾಜ್ಯ ಸರ್ಕಾರ ಎಡವಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಿವೆ. ವಿರೋಧ ಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಆರೋಗ್ಯ ಸಚಿವ ಶ್ರೀರಾಮುಲು, ಕೊರೋನಾ ನಿಯಂತ್ರಣ ನಮ್ಮ ಕೈಯಲ್ಲಿ ಇಲ್ಲ ಎನ್ನುವ ಮೂಲಕ ತಮ್ಮ ಅಸಹಾಯಕತೆಯನ್ನು ಹೊರಹಾಕಿದ್ದಾರೆ. ಈ ಬಗ್ಗೆ ಮತ್ತೆ ಸಂಜೆ ಸ್ಪಷ್ಟೀಕರಣ ನೀಡಿರುವ ಆರೋಗ್ಯ ಸಚಿವರು ನಾನು ಈ ಅರ್ಥದಲ್ಲಿ ಹೇಳಿಕೆ ನೀಡಿಲ್ಲವೆಂದು ಸ್ಪಷ್ಟೀಕರಣ ನೀಡಿದ್ದಾರೆ.

ದೇವರು ದೊಡ್ಡವನು, ನಮ್ಮೆಲ್ಲ ಪ್ರಯತ್ನಗಳಿಗೆ ಅವನ ಕೃಪೆಯೂ ಇರಬೇಕು’ ಎಂಬ ಮಾತಿಗೆ ನಾನು ಈಗಲೂ ಬದ್ಧನಾಗಿದ್ದೇನೆ.ಮುಖ್ಯಮಂತ್ರಿ ಯಡಿ ಯೂರಪ್ಪ ಅವರ ನೇತೃತ್ವದ ಸರ್ಕಾರ ಕೋವಿಡ್ ಸೋಂಕು ಹರಡುವುದನ್ನು ನಿಯಂತ್ರಿಸಲು ಮತ್ತು ಸೋಂಕಿತರ ಚಿಕಿತ್ಸೆಗೆ ಎಲ್ಲ ಅತ್ಯಗತ್ಯ ಕ್ರಮಗಳನ್ನು ಕೈಗೊಂಡಿದೆ.ಇಡೀ ಸರ್ಕಾರ ಸಮಸ್ತ ಜನರ ಪರವಾಗಿ ಕೆಲಸ ಮಾಡುತ್ತಿದೆ. ಯಾರಿಗೂ ಆತಂಕ ಬೇಡ.ನಿಯಮಗಳ ನ್ನು ಕಡ್ಡಾಯವಾಗಿ ಪಾಲಿಸುವ ಮೂಲಕ ಸೋಂಕು ನಿಯಂತ್ರಿಸುವಲ್ಲಿ ಎಲ್ಲರೂ ಸಹಕರಿಸಬೇಕೆಂದು ಕೋರು ತ್ತೇನೆಂದು ಮತ್ತೊಮ್ಮೆ ಮನವಿ ಮಾಡಿಕೊಂಡಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights