ಬಾಬರಿ ಮಸೀದಿ ದ್ವಂಸ ಪ್ರಕರಣ: ಸೆ.30ಕ್ಕೆ ತೀಪು, ಅಡ್ವಾಣಿ ಸೇರಿ 32 ಅರೋಪಿಗಳು ಹಾಜರಾಗಬೇಕು!

28 ವರ್ಷಗಳ ಹಿಂದೆ ನಡೆದ ಬಾಬರಿ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ಸೆಪ್ಟೆಂಬರ್ 30 ರಂದು ನ್ಯಾಯಾಧೀಶ ಎಸ್.ಕೆ.ಯಾದವ್ ವಿಚಾರಣೆ ನಡೆಸಿ, ತೀರ್ಪು ನೀಡಲಿದ್ದಾರೆ.

ತೀರ್ಪಿನ ವಿಚಾರಣೆಗಾಗಿ ಪ್ರಕರಣದ ಎಲ್ಲಾ ಆರೋಪಿಗಳನ್ನು ಆ ದಿನ ನ್ಯಾಯಾಲಯಕ್ಕೆ ಹಾಜರಾಗುವಂತೆ ನ್ಯಾಯಾಲಯ ನಿರ್ದೇಶಿಸಿದೆ.

ಪ್ರಕರಣದ ಆರೋಪಿಗಳಾದ ಬಿಜೆಪಿಯ ಹಿರಿಯ ಮುಖಂಡ ಎಲ್.ಕೆ.ಅಡ್ವಾಣಿ, ಮತ್ತು ರಾಜಸ್ಥಾನದ ಮಾಜಿ ಗವರ್ನರ್ ಕಲ್ಯಾಣ್ ಸಿಂಗ್, ಬಿಜೆಪಿ ಮುಖಂಡ ಎಂ.ಎಂ.ಜೋಶಿ, ಉಮಾ ಭಾರತಿ ಮತ್ತು ವಿನಯ್ ಕಟಿಯಾರ್ ಸೇರಿದಂತೆ 32 ಆರೋಪಿಗಳು ವಿಚಾರಣೆಯಂದು ನ್ಯಾಯಾಲಯದಲ್ಲಿರುವಂತೆ ತಿಳಿಸಲಾಗಿದೆ ಎಂದು ಪಿಟಿಐ ವರದಿ ಮಾಡಿದೆ.

ಈ ಆರೋಪಿಗಳ ಮೇಲೆ 1992 ರ ಡಿಸೆಂಬರ್‌ನಲ್ಲಿ 15 ನೇ ಶತಮಾನದ ಬಾಬರಿ ಮಸೀದಿಯನ್ನು ಧ್ವಂಸಗೊಳಿಸಲು ಕಾರಣವಾದ ಪಿತೂರಿಯ ಆರೋಪ ಇದೆ. ಈ ಪ್ರಕರಣದಲ್ಲಿ ದೇಶಾದ್ಯಂತ ಗಲಭೆಗಳು ಸಂಭವಿಸಿ ಸುಮಾರು 3,000 ಜನರು ಸಾವನ್ನಪ್ಪಿದರು.

ಏಪ್ರಿಲ್ 2017 ರಲ್ಲಿ, ಉನ್ನತ ನ್ಯಾಯಾಲಯವು, ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಎರಡು ವರ್ಷಗಳಲ್ಲಿ ವಿಚಾರಣೆಯನ್ನು ನಡೆಸಿ ಪೂರ್ಣಗೊಳಿಸಲು ಕೇಳಿಕೊಂಡಿತ್ತು. ಅದರ ನಂತರ ಹಲವು ಬಾರಿ ಗಡುವು ವಿಸ್ತರಿಸಲಾಗಿತ್ತು.ಮತ್ತೆ ವಿಶೇಷ ನ್ಯಾಯಾಧೀಶ ಎಸ್.ಕೆ. ಯಾದವ್ ಹೆಚ್ಚಿನ ಸಮಯವನ್ನು ಕೇಳಿದಾಗ, ಸೆಪ್ಟೆಂಬರ್ 30 ರೊಳಗೆ ತನ್ನ ತೀರ್ಪನ್ನು ನೀಡಬೇಕು ಎಂದು ಸುಪ್ರೀಂ ಕೋರ್ಟ್ ಹೇಳಿತ್ತು.

ಕಳೆದ ನವೆಂಬರ್‌ನಲ್ಲಿ ಸುಪ್ರೀಂಕೋರ್ಟ್ ರಾಮ್ ಜನ್ಮಭೂಮಿ ಪ್ರಕರಣದ ತೀಪೂ ನೀಡಿದ್ದು, ದೇವಾಲಯ ನಿರ್ಮಿಸಲು ಆದೇಶಿಸಿತ್ತು. ‌ಈಗಾಗಲೇ ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯಗಳು ಆರಂಭವಾಗಿವೆ. ಪ್ರಧಾನಿ ನರೇಂದ್ರ ಮೋದಿ ಅವರು ಅಯೋಧ್ಯೆಯಲ್ಲಿ ನಡೆದ ಭೂಮಿಪೂಜೆ ಸಮಾರಂಭದಲ್ಲಿ ಭಾಗವಹಿಸಿದ್ದರು.


ಇದನ್ನೂ ಓದಿ: ಅಯೋಧ್ಯೆಯಲ್ಲಿ ಬಾಬರಿ ಮಸೀದಿಯಂತದ್ದೇ ಮಸೀದಿಯ ಜೊತೆಗೆ ಆಸ್ಪತ್ರೆಯೂ ನಿರ್ಮಾಣ; ಟ್ರಸ್ಟ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights