ಸಂವಿಧಾನ ಬದಲಿಸುತ್ತೇವೆನ್ನುವ ಬಿಜೆಪಿ ಕನ್ನಡಕ್ಕಾಗಿ ತಿದ್ದುಪಡಿ ತರಲಿ: ಹೆಚ್‌ಡಿಕೆ

ಸಂವಿಧಾನವನ್ನು ಬದಲಿಸುತ್ತೇವೆ. ನಾವು ಅಧಿಕಾರಕ್ಕೆ ಬಂದಿರುವುದೇ ಸಂವಿಧಾನ ಬದಲಿಸಲು ಎಂದು ಬಿಜೆಪಿ ಸಂಸದರು, ನಾಯಕರು ಹೇಳುತ್ತಲೇ ಇದ್ದಾರೆ. ಈದನ್ನು ಉಲ್ಲೇಖಿಸಿರುವ ಮಾಜಿ ಸಿಎಂ ಕುಮಾರಸ್ವಾಮಿಯವರ, ಸಂವಿಧಾನವನ್ನು ಬದಲಿಸುತ್ತೇವೆ ಎಂದು ಮಾತನಾಡುವ ಬಿಜೆಪಿ ನಾಯಕರು ಕನ್ನಡಕ್ಕಾಗಿ ಸಾಂವಿಧಾನಿಕ ತಿದ್ದಿಪಡಿ ತರಲಿ. ಕನ್ನಡಕ್ಕೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಪ್ರಯತ್ನಿಸಲಿ ಎಂದು ಹೇಳಿದ್ದಾರೆ.

ಕನ್ನಡವೂ ಸೇರಿ ಪ್ರಾದೇಶಿಕ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲಾಗುವುದೇ ಎಂಬ ಪ್ರಶ್ನೆಗೆ ಕೇಂದ್ರ ಇಲ್ಲವೆಂದಿದೆ.ಇದು ಭಾಷಾ ತಿರಸ್ಕಾರದ ಸಂಕೇತ. ಆದರೆ ಹಿಂದಿಯಂತೆ ಕನ್ನಡವೂ ದೇಶದ ಅಧಿಕೃತ ಭಾಷೆ. ಕನ್ನಡ ರಾಷ್ಟ್ರಭಾಷೆಯೇ. ಕೇಂದ್ರಸರ್ಕಾರಿ ಆಡಳಿತದಲ್ಲಿ ಕನ್ನಡ ಸೇರಿ ಇತರ ಭಾಷೆಗಳನ್ನು ಸೇರಿಸಬೇಕಷ್ಟೆ ಎಂದು ಆಗ್ರಹಿಸಿ ಟ್ವೀಟ್ ಮಾಡಿದ್ದಾರೆ.

ಸಂವಿಧಾನದ ಪರಿಚ್ಛೇದ 343, 344, 345ರಲ್ಲಿ ಹಿಂದಿಗೆ ಉತ್ತೇಜನ ನೀಡುವ ಅಂಶಗಳಿವೆ. ಇದೇ ನೆಪದಲ್ಲಿ ಹಿಂದಿ ಹೇರುವ ಪ್ರಯತ್ನ ಕೇಂದ್ರ ಸರ್ಕಾರಗಳಿಂದ ನಿರಂತರವಾಗಿ ನಡೆದಿದೆ. ಸಂವಿಧಾನವನ್ನು ಬದಲಿಸುವ ಮಾತನಾಡುವ ಬಿಜೆಪಿ ನಾಯಕರು ಕನ್ನಡ ಮತ್ತು ಇತರ ಭಾಷೆಗಳಿಗೆ ಹಿಂದಿಯಷ್ಟೇ ಸ್ಥಾನಮಾನ ನೀಡಲು ಸಾಂವಿಧಾನಿಕ ತಿದ್ದುಪಡಿ ತರಲು ಪ್ರಯತ್ನಿಸಲಿ ಎಂದು ಹೇಳಿದ್ದಾರೆ.

ಇತರ ಭಾಷೆಗಳಿಗೆ ಹಿಂದಿಯಷ್ಟು ಸ್ಥಾನಮಾನ ನೀಡಲು ನಿರಾಕರಿಸುತ್ತಿರುವ ಕೇಂದ್ರ ಸರ್ಕಾರ ಮತ್ತು ಅದರ ನೇತೃತ್ವ ವಹಿಸಿರುವ ಬಿಜೆಪಿ, ಹಿಂದಿಯೇತರ ರಾಜ್ಯಗಳ, ಹಿಂದಿಯೇತರ ಭಾಷಿಕರ ಸಂಸದರನ್ನೂ ಒಳಗೊಂಡು ಸರ್ಕಾರ ರಚಿಸಿದೆ ಎಂಬುದು ನೆನಪಿರಲಿ.ಎಲ್ಲ ಅಧಿಕೃತ ಭಾಷೆಗಳನ್ನು ಆಡಳಿತದಲ್ಲಿ ಜಾರಿಗೆ ತಂದು ಅವರೆಲ್ಲರ ಋಣ ತೀರಿಸುವುದು ಬಿಜೆಪಿಯ ಕರ್ತವ್ಯ ಎಂದಿದ್ದಾರೆ.

ಕೇಂದ್ರ ಸರ್ಕಾರದ ಅಧಿಸೂಚನೆ, ಪ್ರಕಟಣೆಗಳು ಇತರೆ ಅಧಿಕೃತ ಭಾಷೆಗಳಲ್ಲಿಯೂ ಇರಬೇಕು ಎಂದು ಸುಪ್ರೀಂ ಕೋರ್ಟ್ ಇತ್ತೀಚಿಗೆ ಪ್ರಕರಣವೊಂದರ ವಿಚಾರಣೆ ವೇಳೆ ಕೇಂದ್ರಕ್ಕೆ ಸೂಚನೆ ನೀಡಿದೆ. ಅಲ್ಲದೇ, ಭಾರತದ ಒಕ್ಕೂಟ ವ್ಯವಸ್ಥೆಯಲ್ಲಿ ಎಲ್ಲರೂ, ಎಲ್ಲ ಭಾಷೆಗಳೂ ಸರಿಸಮಾನ ಎಂಬುದನ್ನು ಸರ್ಕಾರ ಗಮನದಲ್ಲಿಟ್ಟುಕೊಳ್ಳಬೇಕು ಎಂದು ಹೇಳಿದ್ದಾರೆ.


ಇದನ್ನೂ ಓದಿ: IPL 2020: ಖಾಲಿ ಸ್ಟೇಡಿಯಂನಲ್ಲಿ ಐಪಿಎಲ್ ಆಟ- ರೈನಾ, ಭಜ್ಜಿ ಬಚ್ಚಿಟ್ಟಿದ್ದಾರಾ ಭಯಾನಕ ಸೀಕ್ರೆಟ್..?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights