ಮೋದಿಯಿಂದ ದೇಶದ ಆರ್ಥಿಕತೆ ದಿವಾಳಿ; ನಿರುದ್ಯೋಗ ದಿನವನ್ನು ಬೆಂಬಲಿಸುತ್ತೇನೆ: ಸಿದ್ದರಾಮಯ್ಯ

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬವನ್ನು ಬಿಜೆಪಿಗರು ಸೇವಾ ಸಪ್ತಾಹ ಎಂದು ಆಚರಣೆ ಮಾಡುತ್ತಿದ್ದರೆ, ಮತ್ತೊಂದೆಡೆ ದೇಶದ ಯುವಜನರು ರಾಷ್ಟ್ರೀಯ ನಿರುದ್ಯೋಗ ದಿನ ಎಂದು ಆಚರಣೆ ನಡೆಸುತ್ತಿದ್ದಾರೆ. ನಿನ್ನೆ ರಾತ್ರಿಯಿಂದಲೇ #NationalUnemploymentDay ಹ್ಯಾಶ್‌ಟ್ಯಾಗ್‌ ಟ್ವಿಟರ್‌ನಲ್ಲಿ ಟ್ರೆಂಟ್‌ ಆಗುತ್ತಿದೆ. ರಾಷ್ಟ್ರೀಯ ನಿರುದ್ಯೋಗ ದಿನದ ಆಚರಣೆ ಬಗ್ಗೆ ಮಾತನಾಡಿರುವ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಆಂದೋಲನವನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ.

ಇಂದು ಪ್ರಧಾನಿ ಮೋದಿಯವರು ಹುಟ್ಟಿದ ದಿನ, ಅವರಿಗೆ ನಾನು ಶುಭಾಷಣ ಕೋರುತ್ತೇನೆ. ಆದರೆ ಕೊರೊನಾದಂತಹ ಸಂಕಷ್ಟಹಾಗೂ ಆರ್ಥಿಕ ಬಿಕ್ಕಟ್ಟಿನ ಸಂದರ್ಭದಲ್ಲಿಯೂ ಕೋಟ್ಯಂತರ ರೂಪಾಯಿ ಖರ್ಚು ಮಾಡಿ ಪತ್ರಿಕೆಗಳಿಗೆ ಪುಟಗಟ್ಟಲೆ ಜಾಹಿರಾತು ನೀಡಲಾಗಿದೆ. ಮೋದಿಯವರು ಭಾರಿ ಸಾಧನೆ ಮಾಡಿದ್ದಾರೆ ಎಂದು ಜಾಹೀರಾತಿನಲ್ಲಿ ಬಿಂಬಿಸಲಾಗಿದೆ ಎಂದು ಮಾಧ್ಯಮಗಳೊಂದಿಗೆ ಸಿದ್ದರಾಮಯ್ಯ ಹೇಳಿದ್ದಾರೆ.

ಮೋದಿಯವರು ಪ್ರಧಾನಿಯಾದ ಬಳಿಕ ದೇಶದ ಆರ್ಥಿಕ ಪರಿಸ್ಥಿತಿ ದಿವಾಳಿಯಾಗಿದೆ. ನೋಟು ಅಮಾನ್ಯ, ಅವೈಜ್ಞಾನಿಕ ಜಿ.ಎಸ್.ಟಿ. ಹಾಗೂ ಕೆಟ್ಟ ಹಣಕಾಸು ನೀತಿಯಿಂದಾಗಿ ದೇಶದ ಆರ್ಥಿಕತೆ ಪಾತಾಳಕ್ಕೆ ಕುಸಿದಿದೆ.  ಜಿಡಿಪಿಯೂ ಭಾರಿ ಕುಸಿತ ಕಂಡಿದೆ. ಇದರಿಂದ ಉದ್ಯೋಗ ಸೃಷ್ಟಿ ಆಗದೆ ನಿರುದ್ಯೋಗ ಪ್ರಮಾಣ ದೇಶದಲ್ಲಿ ಹೆಚ್ಚಾಗುತ್ತಿದೆ. ಈ ಸಂದರ್ಭದಲ್ಲಿ ನಿರುದ್ಯೋಗ ದಿನವನ್ನು ಆಚರಿಸುತ್ತಿರುವವರಿಗೆ ನನ್ನ ಬೆಂಬಲವಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.


Read Also: Modi Birthday: ಪಕೋಡ ಮಾರಿ ಎಂದಿದ್ದ ಮೋದಿ ಹುಟ್ಟಿದ ದಿನಕ್ಕೆ ರಾಷ್ಟ್ರೀಯ ನಿರುದ್ಯೋಗ ದಿನ ಆಚರಣೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights