ಸಮಸ್ಯೆಗಳನ್ನು ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ಭಗವಂತ ಕರುಣಿಸಲಿ: ಮೋದಿಗೆ ಹೆಚ್‌ಡಿಕೆ, ಸಿದ್ದು ವಿಭಿನ್ನ ಶುಭಾಷಯ

ಪ್ರಧಾನಿ ನರೇಂದ್ರ ಮೋದಿಯವರು ಇಂದು 70 ನೇ ಜನ್ಮದಿನವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಪ್ರಧಾನಿಯವರ ಹುಟ್ಟಿದ ದಿನಕ್ಕೆ ದೇಶಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಶುಭಾಶಯಗಳ ಸುರಿಮಳೆ ಸುರಿಯತ್ತಿವೆ. ಅದೇ ರೀತಿಯಲ್ಲಿ ಯುವಜನರು ರಾಷ್ಟ್ರೀಯ ನಿರುದ್ಯೋಗ ದಿನವನ್ನೂ ಆಚರಿಸುತ್ತಿದ್ದಾರೆ. ಈ ನಡುವೆ ಕರ್ನಾಟಕದ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಮತ್ತು ಎಚ್.ಡಿ.ಕುಮಾರಸ್ವಾಮಿ ಪ್ರಧಾನಿಗೆ ವಿಶೇಷವಾಗಿ ಶುಭಾಶಯ ತಿಳಿಸಿದ್ದಾರೆ.

ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ.ಕುಮಾರಸ್ವಾಮಿ ಪ್ರಧಾನಿ ಅವರಿಗೆ ಜನ್ಮದಿನದ ಶುಭಾಶಯಗಳು. ಭಗವಂತ ನಿಮಗೆ ಅಯುರಾರೋಗ್ಯ ದಯಪಾಲಿಸಲೆಂದು ನಾನು ಈ ಸಂದರ್ಭದಲ್ಲಿ ಕೋರುತ್ತೇನೆ ಎಂದು ಶುಭಕೋರಿ ಮತ್ತೆ ಇನ್ನೊಂದು ಟ್ವೀಟ್ ಮುಖಾಂತರ ಕಾಲೆಳೆದಿದ್ದಾರೆ. ಕೋವಿಡ್, ಚೀನಾ ತಂಟೆ, ಆರ್ಥಿಕತೆ ಕುಸಿತ, ನಿರುದ್ಯೋಗದಂಥ ಸಮಸ್ಯೆ ಮೆಟ್ಟಿನಿಲ್ಲುವ ಸಾಮರ್ಥ್ಯವನ್ನು ಭಗವಂತ ಕರುಣಿಸಲಿ ಎಂಬ ಜನಾಶಯದ ಹಾರೈಕೆಯೂ ನನ್ನದು ಕೂಡ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನವನ್ನು “ರಾಷ್ಟ್ರೀಯ ನಿರುದ್ಯೋಗ ದಿನ”ವನ್ನಾಗಿ ಆಚರಿಸಿ ಎಂದು ಸಾಮಾಜಿಕ ಮಾಧ್ಯಮಗಳಲ್ಲಿ ಈ ಹಿಂದೆ ಟ್ರೆಂಡಿಂಗ್ ಆಗುತ್ತಿದ್ದು, ಈ ಅಭಿಯಾನಕ್ಕೆ ಬೆಂಬಲ ಸೂಚಿಸಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸರಣಿ ಟ್ವೀಟ್‌ಗಳನ್ನು‌ ಮಾಡಿದ್ದಾರೆ.

ವರ್ಷಕ್ಕೆ 2 ಕೋಟಿ ಉದ್ಯೋಗ ನೀಡುವ ಭರವಸೆಯೊಂದಿಗೆ ಅಧಿಕಾರಕ್ಕೆ ಬಂದ ಮೋದಿಯವರು ಕಳೆದ 45 ವರ್ಷಗಳಲ್ಲಿ ಅತ್ಯಧಿಕ ನಿರುದ್ಯೋಗಕ್ಕೆ ಕಾರಣಕರ್ತರಾಗಿದ್ದಾರೆ. ಇದರ ವಿರುದ್ಧ ಸಿಡಿದೆದ್ದಿರುವ ದೇಶದ ಯುವಜನತೆ ಪ್ರಾರಂಭಿಸಿರುವ ಅಭಿಯಾನವನ್ನು ನಾನು ಬೆಂಬಲಿಸುತ್ತೇನೆ ಎಂದಿದ್ದಾರೆ. 

ಇನ್ನೊಂದು ಟ್ವೀಟ್‌ನಲ್ಲಿ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ. ಎಂದು #NationalUnemploymentDay  ಹ್ಯಾಶ್‌ಟ್ಯಾಗ್ ಬಳಸಿ ಪೋಸ್ಟ್ ಮಾಡಿದ್ದಾರೆ. 

ನರೇಂದ್ರ ಮೋದಿಯವರ ಆಡಳಿತದ ನಿರುದ್ಯೋಗ ಪರ್ವ ನಿರಾಂತಕವಾಗಿ ಮುಂದುವರಿದಿದೆ. ಕಳೆದ 6 ತಿಂಗಳಲ್ಲಿ ಸಂಬಳ‌ ಪಡೆಯುವ ಎರಡು ಕೋಟಿ ಉದ್ಯೋಗಗಳು ಮತ್ತು ಒಟ್ಟು 12 ಕೋಟಿ ಉದ್ಯೋಗಗಳು ನಷ್ಟವಾಗಿವೆ. ಉದ್ಯೋಗ ಸೃಷ್ಟಿಗೆ ನಿಮ್ಮ ಯೋಚನೆ ಮತ್ತು ಯೋಜನೆ ಏನು? ದೇಶದ ಯುವಜನ ಕೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ದೇಶದ ಯುವಜನತೆ ಪ್ರಧಾನಿ ನರೇಂದ್ರ ಮೋದಿ ಅವರಲ್ಲಿ ಭರವಸೆ ಇಟ್ಟು ಮತ ನೀಡಿದ್ದರು, ಇಂದು ಅದೇ ಯುವಜನಾಂಗ ಉದ್ಯೋಗವಿಲ್ಲದೆ ಖಿನ್ನತೆ ಅನುಭವಿಸುತ್ತಿದೆ. ಕೃಷಿ ಕ್ಷೇತ್ರವೊಂದನ್ನು ಹೊರತುಪಡಿಸಿ ದೇಶದ ಉಳಿದೆಲ್ಲಾ ವಲಯಗಳ ಪ್ರಗತಿ ಋಣಾತ್ಮಕವಾಗಿದೆ. ಇದರಿಂದ ರಾಷ್ಟ್ರದ ಭವಿಷ್ಯಕ್ಕೆ ಅಂಧಕಾರ ಆವರಿಸಿದೆ ಎಂದಿದ್ದಾರೆ.

ಮಾರ್ಚ್‌ನಲ್ಲಿ 564 ಇದ್ದ ದೇಶದ ಕೊರೊನಾ ಸೋಂಕಿತರ ಪ್ರಮಾಣವನ್ನು ಕೇವಲ ಆರೇ ತಿಂಗಳಲ್ಲಿ 51 ಲಕ್ಷಕ್ಕೆ ಮುಟ್ಟಿಸಿರುವುದೇ ನರೇಂದ್ರ ಮೋದಿ  ಅವರ ಮಹತ್ತರ ಸಾಧನೆ. ಭಾರತವನ್ನು ವಿಶ್ವಗುರು ಮಾಡ್ತೀನಿ ಅಂತ ಹೇಳಿ, ಈಗ ಕೊರೊನಾದಲ್ಲಿ ನಂ.1 ಮಾಡಲು ಹೊರಟಿದ್ದಾರೆ. ಸದ್ಯ ಸೋಂಕಿತರ ಏರಿಕೆ ಪ್ರಮಾಣದಲ್ಲಿ ಭಾರತವೇ ಮುಂದಿದೆ ಎಂದು ಕಾಲೆಳೆದಿದ್ದಾರೆ.


ಇದನ್ನೂ ಓದಿ: ಹಿಂದುಳಿದವರನ್ನು ಹೊರಗಿಟ್ಟಿದ್ದ 2000 ವರ್ಷಗಳ ಹಿಂದಿನ ಶಿಕ್ಷಣ ಪದ್ದತಿಯ ಸವಕಲು NEP: ಮಲ್ಲಿಕಾರ್ಜುನ ಖರ್ಗೆ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights