ಭಾರತದಲ್ಲಿ ಕೊರೊನಾ ರೌದ್ರನರ್ತನ : ಹೊಸದಾಗಿ 96,424 ಕೇಸ್! 1,132  ಸೋಂಕಿತರ ಸಾವು

ದಿನ ಕಳೆದಂತೆ ಭಾರತದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೇ ಇದೆ. ಕಳೆದ 24 ಗಂಟೆಯಲ್ಲಿ ಭಾರತದಲ್ಲಿ 97,894 ಸೋಂಕಿತರು ದಾಖಲಾಗಿದ್ದಾರೆ. 1,132  ಸೋಂಕಿತರು ಮಹಾಮಾರಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 51,18,253 ಕ್ಕೆ ಏರಿದ್ದು, ಈವರೆಗೆ ಒಟ್ಟು 83,198 ಸೋಂಕಿತರು ಕೋವಿಡ್ -19 ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

ಗುರುವಾರ ಒಂದೇ ದಿನ ಭಾರತದಲ್ಲಿ ಸಕ್ರಿಯವಾಗಿರುವ ಸುಮಾರು 60% ಪ್ರಕರಣಗಳು ಕೇವಲ 5 ಹೆಚ್ಚು ಪೀಡಿತ ರಾಜ್ಯಗಳಲ್ಲಿ ಕೇಂದ್ರೀಕೃತವಾಗಿವೆ ಎಂದು ಆರೋಗ್ಯ ಸಚಿವಾಲಯ ಹೇಳಿದೆ. ದೆಹಲಿಯಲ್ಲಿ, ಪರೀಕ್ಷಾ ಸಾಮರ್ಥ್ಯವನ್ನು ನಾಲ್ಕು ಪಟ್ಟು ಹೆಚ್ಚಿಸಿರುವುದರಿಂದ ಮುಂದಿನ 10 ದಿನಗಳಲ್ಲಿ ಪ್ರಕರಣಗಳು ಹೆಚ್ಚಾಗಲಿವೆ ಎಂದು ಆರೋಗ್ಯ ಸಚಿವರು ತಿಳಿಸಿದೆ. ದೆಹಲಿಯಲ್ಲಿ ಪ್ರತಿದಿನ 4,000 ಕ್ಕೂ ಹೆಚ್ಚು ಕೊರೋನವೈರಸ್ ಪ್ರಕರಣಗಳು ಕಂಡುಬರುತ್ತಿವೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights