ಡ್ರಗ್ಸ್‌ ಮಾಫಿಯಾ: ನಿರೂಪಕ ಅಕುಲ್ ಬಾಲಾಜಿ ಸೇರಿ ಮೂವರಿಗೆ ಸಿಸಿಬಿ ನೋಟಿಸ್‌!

ಸ್ಯಾಂಡಲ್‌ವುಡ್‌ನಲ್ಲಿ ಡ್ರಗ್ಸ್‌ ಮಾಫಿಯಾ ವಿಚಾರಣೆ ಮುಂದುವರೆದಿದೆ. ಸಿಸಿಬಿ ಅಧಿಕಾರಿಗಳು ಸ್ಯಾಂಡಲ್‌ವುಡ್‌ ಸ್ಟಾರ್‌ಗಳನ್ನು ವಿಚಾರಣಗೆ ಒಳಪಡಿಸುತ್ತಿದ್ದಾರೆ. ತನಿಖೆ ಚುರುಕುಗೊಳಿಸಿರುವ ಸಿಸಿಬಿ ಮತ್ತೆ ಮೂವರಿಗೆ ನೋಟಿಸ್ ನೀಡಿದೆ.

ಮಾಜಿ ಶಾಸಕ ಆರ್ ವಿ .ದೇವರಾಜ್ ಅವರ ಪುತ್ರ ಯುವರಾಜ್, ಬಿಗ್ ಬಾಸ್ ಸ್ಪರ್ಧಿಯಾಗಿದ್ದ ಸಂತೋಷ್‌ ಕುಮಾರ್ ಹಾಗೂ ನಟ, ನಿರೂಪಕ ಅಕುಲ್ ಬಾಲಾಜಿ ಅವರಿಗೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ.

ಮೂವರೂ ನಾಳೆ (ಶನಿವಾರ) ಬೆಳಗ್ಗೆ 10 ಗಂಟೆಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ನೋಟೀಸ್ ನಲ್ಲಿ ತಿಳಿಸಲಾಗಿದೆ.

Read Alsoಸ್ಯಾಂಡಲ್ ವುಡ್ ಡ್ರಗ್ಸ್ ಮಾಫಿಯಾ : ತನಿಖಾ ಅಧಿಕಾರಿಗಳಿಂದ ಇನ್ನಷ್ಟು ನಟರಿಗೆ ನೋಟಿಸ್!

“ನಾನು ಹೈದರಾಬಾದ್ ನಲ್ಲಿದ್ದೇನೆ. ನನಗೆ ಸಿಸಿಬಿ ನೋಟೀಸ್ ಸಿಕ್ಕಿದೆ. ನಾಳೆ ವಿಚಾರಣೆಗೆ ಕರೆಯಲಾಗಿದ್ದು ವಿಚಾರಣೆಗೆ ಹಾಜರಾಗುತ್ತೇನೆ” ಎಂದು ಅಕುಲ್ ಬಾಲಾಜಿ ಹೇಳಿದ್ದಾರೆ.

“ನಾನು ಸಂಬಂಧಿಕರ ಮನೆ ಕಾರ್ಯಕ್ರಮದ ನಿಮಿತ್ತ ಮೈಸೂರಿನಲ್ಲಿದ್ದು ನಾಳೆ ವಿಚಾರಣೆಗೆ ಹಾಜರಾಗಿದ್ದೇನೆ” ಎಂದು ಸಂತೋಷ್ ತಿಳಿಸಿದ್ದಾರೆ.


ಇದನ್ನೂ ಓದಿ: ಬಿಗ್ ಬಾಸ್ 4 ಸ್ಪರ್ಧಿಗಳ ಮನೆಯೊಳಗೆ ಕಾಡುತಿದೆ ಕೊರೊನಾ ಭಯ..!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights