ಸೆಪ್ಟೆಂಬರ್ 21 ರಿಂದ ಶಾಲೆಗಳು ಓಪನ್; ತರಗತಿಗಳು ಪ್ರಾರಂಭವಾಗುವುದಿಲ್ಲ: ಸುರೇಶ್ ಕುಮಾರ್

ಕರ್ನಾಟಕದಲ್ಲಿ ಸೆ. 21 ರಿಂದ ಶಾಲೆಗಳು ತೆರೆಯುತ್ತೇವೆ. ಆದರೆ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಹೇಳಿದ್ದಾರೆ.

ಸೆಪ್ಟೆಂಬರ್ 21ರಿಂದ ಶಾಲೆಗಳು ತೆರೆಯಲಿದ್ದು,  ಸೆ.30ರೊಳಗೆ 1ರಿಂದ 10ನೇ ತರಗತಿ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆ ಮುಗಿಯಬೇಕು. ಆದರೆ, ಸದ್ಯದಲ್ಲಿ ತರಗತಿಗಳು ಪ್ರಾರಂಭವಾಗುವುದಿಲ್ಲ ಎಂದು ಮೈಸೂರಿನಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯಕ್ಕೆ 5,495 ಕೋಟಿ ರೂ.ಗಳ ವಿಶೇಷ ಅನುದಾನ ಕೊಡಿ: ಕೇಂದ್ರಕ್ಕೆ ಬಿಎಸ್‌ವೈ ಮನವಿ!

ಖಾಸಗಿ ಶಾಲೆಗಳು ಕೇವಲ ಒಂದು ಅವಧಿಯ ಶುಲ್ಕವನ್ನು​ ಮಾತ್ರ ಪೋಷಕರಿಂದ ಪಡೆಯಬೇಕು. ಖಾಸಗಿ ಶಾಲೆಗಳಿಂದ ಪೋಷಕರಿಗೆ ಸಮಸ್ಯೆಯಾದರೆ ಡಿಡಿಪಿಐ, ಬಿಇಓ ಈ ಬಗ್ಗೆ ಕ್ರಮ ಕೈಗೊಳ್ಳುತ್ತಾರೆ. ಪೊಷಕರು ಬಿಇಓ ಅವರನ್ನು ಸಂಪರ್ಕಿಸಬಹುದು. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ ಎಂದು ತಿಳಿಸಿದ್ದಾರೆ.

ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರೂ ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ದರೆ, ಬಿಇಓಯಿಂದ ಕೊಡಿಸುವ ವ್ಯವಸ್ಥೆ ಮಾಡುತ್ತೇವೆ ಎಂದು ಹೇಳಿದ್ದಾರೆ.


ಇದನ್ನೂ ಓದಿ:  ಮೋದಿ ಸರ್ಕಾರದ ಕೃಷಿ ನೀತಿ ರೈತ ವಿರೋಧಿಯಾಗಿದೆ ಎಂದು ಸಚಿವ ಸ್ಥಾನಕ್ಕೆ ಕೇಂದ್ರ ಸಚಿವೆ ರಾಜೀನಾಮೆ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights