ಮೋದಿ ಸರ್ಕಾರದ Contract Farming ಮಸೂದೆ ಕೃಷಿ ಕಂಪನಿಗಳನ್ನು ಸಬಲೀಕರಿಸಿ ರೈತರನ್ನು ನೇಣಿಗೇರಿಸುವುದು ಹೀಗೆ . . .

ಮೋದಿ ಸರ್ಕಾರ ಸದನದಲ್ಲಿ ಪಾಸು ಮಾಡಿಸಿಕೊಂಡಿರುವ ಎಲ್ಲಾ ರೈತ ಸಂಬಂಧೀ ಮಸೂದೆ ಗಳು ರೈತರ ಆದಾಯ ದ್ವಿಗುಣಗೊಳಿ ರೈತರನ್ನು ಉದ್ಧಾರ ಮಾಡಲೆಂದೇ ತರಲಾಗಿದೆ ಎಂದು ಪ್ರಚಾರ ಮಾಡಲಾಗುತ್ತಿದೆಯಷ್ಟೆ…

ಆ ಮೂರೂ ಮಸೂದೆಗಳಲ್ಲಿ ಕೃಷಿ ಸೇವೆ ಮತ್ತು ಬೆಲೆ ಖಾತರಿ ಒಪ್ಪಂದಗಳಲ್ಲಿ ರೈತರ ಸುರಕ್ಷೆ ಮತ್ತು ಸಬಲೀಕರಣ ಮಸೂದೆ ( THE FARMERS (EMPOWERMENT AND PROTECTION) AGREEMENT ON PRICE ASSURANCE AND FARM SERVICES BILL, 2020 ) ಅರ್ಥಾತ್ ಕಾಂಟ್ರಾಕ್ಟ್ ಫಾರ್ಮಿಂಗ್ ಮಸೂದೆಯು ಒಂದು .

ಈ ಮಸೂದೆಯ ಪ್ರಕಾರ ರೈತಾಪಿ ಹಾಗು ದೊಡ್ಡ ಕಾರ್ಪೊರೇಟ್ ಕಂಪನಿಗಳು (ಸರ್ಕಾರದ ಭಾಷೆಯಲ್ಲಿ ಹೇಳುವುದಾದರೆ -Sponosores- ಪ್ರಾಯೋಜಕರು ) ಬೆಲೆ, ಗುಣಮಟ್ಟ ( quality, grade, and standard ) ಹಾಗು ಬೆಳೆಗಳ ಬಗ್ಗೆ ಪೂರ್ವಭಾವಿ ಒಪ್ಪಂದಕ್ಕೆ ಬರಬಹುದು.

ಹಾಗೂ ಆ ಒಪ್ಪಂದಗಳಿಗೆ ಸರ್ಕಾರ ರೂಪಿಸಿರುವ ಚೌಕಟ್ಟು ರೈತರ ಪರವಾಗಿದೆ ಮತ್ತು ಅವರನ್ನು ಸಬಲೀಕರಿಸುವುದಕ್ಕೆ ಪೂರಕವಾಗಿದೆ ಎಂದು ಸರ್ಕಾರದ ವಾದ …

ಆದರೆ ಸರ್ಕಾರದ ಈ ಭರವಸೆ ಎಷ್ಟು ಸುಳ್ಳು ಎಂಬುದನ್ನು ಆ ಮಸೂದೆಯ ಕೆಳಗಿನ ಮೂರು ಅಂಶಗಳನ್ನು ಮಾತ್ರ ನೋಡಿದರೂ ಅರ್ಥವಾಗುತ್ತದೆ:

– ಮಸೂದೆಯ 4 ನೇ ಸೆಕ್ಷನ್ನಿನ 2ನೇ ಸಬ್ ಕ್ಲಾಸಿನ ಪ್ರಕಾರ :
ರೈತಾಪಿ ಹಾಗು ಪ್ರಾಯೋಜಕರು ಬೆಳೆಯ ಗುಣಮಟ್ಟದ ಬಗ್ಗೆ ಮಾಡಿಕೊಳ್ಳುವ ಒಪ್ಪಂದವು ಸರ್ಕಾರ ಅಥವಾ ಸರ್ಕಾರದಿಂದ ಗುರುತಿಸಲ್ಪಟ್ಟ “ಸ್ವತಂತ್ರ” ಏಜೆನ್ನಿಯು ನಿಗದಿ ಮಾಡುವ ಗುಣಮಟ್ಟವನ್ನು ಅಳವಡಿಸಿಕೊಳ್ಳಬೇಕು.

– ಎಲ್ಲಕ್ಕಿಂತ ಮುಖ್ಯವಾಗಿ ಮಸೂದೆಯ ಸೆಕ್ಷನ್ 6ರ ಸಬ್ ಕ್ಲಾಸ್ 2 ಹೀಗೆ ಹೇಳುತ್ತದೆ:
6 (2) – The Sponsor may, before accepting the delivery of any farming produce, inspect the quality or any other feature of such produce as specified in the farming agreement, otherwise, he shall be deemed to have inspected the produce and shall have no right to retract from acceptance of such produce at the time of its delivery or thereafter.

ಅಂದರೆ ಪ್ರಾಯೋಜಕರು ರೈತರಿಂದ ಸರಕನ್ನು ಸ್ವೀಕರಿಸುವ ಮುನ್ನ ಸರಕಿನ ಗುಣಮಟ್ಟವು ಒಪ್ಪಂದದಲ್ಲಿ ಮಾಡಿಕೊಂಡ ಗುಣಮಟ್ಟಕ್ಕೆ ತಕ್ಕ ಹಾಗಿದೆಯೇ ಎಂದು ಪರಿಶೀಲಿಸಬೇಕು..ಒಂದು ವೇಳೆ ಪರಿಶೀಲಿಸದೆ ಒಪ್ಪಿಕೊಂಡರೆ ಆ ನಂತರ ಸರಕನ್ನು ತಿರಸ್ಕರಿಸುವಂತಿಲ್ಲ ಎಂದರ್ಥ.

ಇದನ್ನೂ ಓದಿ: ನವ ಉದಾರವಾದಿ ಭಾರತದಲ್ಲಿ ದಲಿತರು- ಮೇಲ್ಚಲನೆಯೋ ಅಥವಾ ಮೂಲೆಗುಂಪೋ?

ಕೊನೆಯ ಸಾಲಿನಲ್ಲಿ ರೈತಪರ ಧ್ವನಿ ಕಂಡುಬಂದರೂ ಒಟ್ಟಾರೆ ತಾತ್ಪರ್ಯವೇನು ?

ಒಂದು ವೇಳೆ ಸರಕು ಸ್ವೀಕರಿಸುವ ಮುನ್ನ ಗುಣಮಟ್ಟ ಪರಿಶೀಲಿಸಿದಾಗ ಒಪ್ಪಂದದ ಗುಣಮಟ್ಟಕ್ಕೆ ತಕ್ಕ ಹಾಗೆ ಸರಕಿಲ್ಲ ಎಂದರೆ ಡೆಲಿವರಿಯನ್ನು ತಿರಸ್ಕರಿಸಬಹುದು ಎನ್ನುವುದೇ ಈ ಸಬ್ ಕ್ಲಾಸಿನ ನಿಜವಾದ ತಾತ್ಪರ್ಯ…

ಆಗ ರೈತನಿಗೆ ಇರುವ ದಾರಿಗಳೇನು?

– ಮಸೂದೆಯ 13 ಮತ್ತು 14 ನೇ ಸೆಕ್ಷನ್ನಿನ ಪ್ರಕಾರ ಆಗ ರೈತ ತಾನು ಒಪ್ಪಂದ ಮಾಡಿಕೊಂಡ ಪ್ರಾಯೋಜಕ ದೈತ್ಯ ಕಂಪನಿಯ ಬಗ್ಗೆ ಆ ಪ್ರದೇಶದ ತಹಶೀಲ್ದಾರರಿಗೆ ದೂರು ಸಲ್ಲಿಸಬಹುದು .

ಆಗ ತಹಶೀಲ್ದಾರ್ ಪ್ರಾಯೋಜಕ, ರೈತ ಹಾಗು ಮೂರನೇ ವ್ಯಕ್ತಿಗಳು ಇರುವ ಒಂದು ಸಂಧಾನ ಸಮಿತಿ ಮಾಡುತ್ತಾರೆ. ಅದು 30 ದಿನಗಳೊಳಗೆ ಸಂಧಾನ ಕ್ಕೆ ಬರಬೇಕು.

एग्रीकल्चर बिल: कांट्रैक्ट फार्मिंग में कंपनी के साथ विवाद होने पर कोर्ट  नहीं जा सकेंगे किसान | business - News in Hindi - हिंदी न्यूज़, समाचार ...

ಅದು ಆಗದಿದ್ದಲ್ಲಿ ತಹಶೀಲ್ದಾರ್ ಮುಂದಿನ 30 ದಿನಗಳೊಳಗೆ ವ್ಯಾಜ್ಯ ಬಗೆಹರಿಸಬೇಕು. ಈ ತೀರ್ಮಾನವು ಸರಿ ಬರಲಿಲ್ಲವೆಂದರೆ ಡಿಸಿ ನೇತೃತ್ವದ ಮೇಲ್ಮನವಿ ಸಮಿತಿಗೆ ದೂರು ಸಲ್ಲಿಸಬಹುದು .

ಅದು ಮುಂದಿನ 30ದಿನಗಳಲ್ಲಿ ಏನು ತೀರ್ಮಾನ ಕೊಡುತ್ತದೋ ಅದು ಅಖೈರು.

ಎಲ್ಲಾ ಸರ್ಕಾರಗಳೂ ಮತ್ತು ಪಕ್ಷಗಳು ಬಹಿರಂಗವಾಗಿ ಸ್ಪರ್ಧಾತ್ಮಕ ವಾಗಿ ಬಹುರಾಷ್ಟ್ರೀಯ ಕಂಪನಿಗಳ ಹಿತಾಸಕ್ತಿ ಗೆ ಪರವಾದ ನೀತಿಗಳನ್ನು ಘೋಷಿಸುತ್ತಿರುವಾಗ, ಅವರಡಿ ಕೆಲಸ ಮಾಡುವ ಅಧಿಕಾರಿಗಳ ಕೋರ್ಟುಗಳು ಕಂಪನಿಗಳ ವಿರುದ್ಧ ಸೊಲ್ಲೆತ್ತಬಲ್ಲವೇ₹

ಜೊತೆಗೆ, ಈ ಇಡೀ ವ್ಯಾಜ್ಯದ ಅವಧಿಯಲ್ಲಿ ರೈತ ತನ್ನ ಸರಕನ್ನು ಬೇರೆಡೆ ಮಾರುವ ಹಾಗು ಇಲ್ಲ. ಸಂಗ್ರಹಿಸಿಟ್ಟುಕೊಳ್ಳಲು ಸಣ್ಣಪುಟ್ಟ ರೈತರಿಗೆ ಯಾವುದೇ ಸೌಕರ್ಯವೂ ಇರುವುದಿಲ್ಲ.

ನೂರು ದಿನಗಳ ಕಾಲ ಬೆಳೆದ ಬೆಳೆಗೆ ಹಣ ದಕ್ಕಲಿಲ್ಲವೆಂದರೆ ರೈತರಿಗೆ ನೇಣು ಹಾಕಿಕೊಳ್ಳುವುದು ಬಿಟ್ಟು ಬೇರೆ ಪರ್ಯಾಯವು ಇರುವುದಿಲ್ಲ.

ಮತ್ತೊಂದೆಡೆ ಲಕ್ಷ ಕೋಟಿ ವ್ಯವಹಾರ ನಡೆಸುವ ಕಂಪನಿಗಳಿಗೆ ಈ ವ್ಯಾಜ್ಯಗಳಿಂದ ಯಾವ ತೊಂದರೆಯು ಇರುವುದಿಲ್ಲ.

ಇದು ಈ ಕಾಂಟ್ರಾಕ್ಟ್ ಕೃಷಿ ಮಸೂದೆಯ ನಿಜವಾದ ಚಹರೆ

-ಶಿವಸುಂದರ್


ಇದನ್ನೂ ಓದಿ: ಒಳಮೀಸಲಾತಿಯ ತತ್ವವಿಲ್ಲದೇ ಮೀಸಲಾತಿಗೆ ಸತ್ವವಿರದು: ಅಧ್ಯಯನ ಬರಹ

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights