ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ಇನ್ನಿಲ್ಲ….!

ಕಳೆದ ತಿಂಗಳಿನಿಂದ ಕೋವಿಡ್ -19 ದೊಂದಿಗೆ ಹೋರಾಡುತ್ತಿದ್ದ ಗಾನ ಗಂಧರ್ವ ಎಸ್ ಪಿ ಬಾಲಸುಬ್ರಹ್ಮಣ್ಯಂ ನಮ್ಮನ್ನ ಅಗಲಿದ್ದಾರೆ. ಅತ್ಯಂತ ಗಂಭೀರ ಸ್ಥಿತಿಯಲ್ಲಿದ್ದ ಅವರು ಚಿಕಿತ್ಸೆಗೆ ಸ್ಪಂದಿಸಿದೆ ಕೊನೆಯುಸಿರೆಳೆದಿದ್ದಾರೆಂದು ಚೆನ್ನೈನ ಇಂದಿನ ಎಂಜಿಎಂ ಹೆಲ್ತ್‌ಕೇರ್‌ನಲ್ಲಿ ಬುಲೆಟಿನ್ ತಿಳಿಸಲಾಗಿದೆ.

ಎಸ್ ಪಿ ಬಾಲಸುಬ್ರಹ್ಮಣ್ಯಂ ಭಾರತದ ಸುಪ್ರಸಿದ್ಧ ಹಿನ್ನೆಲೆ ಗಾಯಕರು. ದಕ್ಷಿಣ ಭಾರತದ ಕನ್ನಡ, ತಮಿಳು ಮತ್ತು ತೆಲುಗು ಚಿತ್ರರಂಗಗಳಲ್ಲಿ ಅವರದ್ದು ಅದ್ವಿತೀಯ ಸಾಧನೆ ಗಾಯನದಲ್ಲಷ್ಟೇ ಅಲ್ಲದೆ, ನಟನೆ, ಸಂಗೀತ ಸಂಯೋಜನೆ, ಚಲನಚಿತ್ರ ನಿರ್ಮಾಣ, ಧ್ವನಿದಾನ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆ ಮುಂತಾದವುಗಳಲ್ಲಿ ಅವರು ನಿರಂತರವಾದ ಸಾಧನೆ ಮಾಡಿದ್ದಾರೆ.

54 ವರ್ಷದ ಅವರು ಶಂಕರಾಭರಣಂ, ಪಂಚಾಕ್ಷರಿ ಗವಾಯಿ, ಸಾಗರ ಸಂಗಮಂ, ಸ್ವಾತಿ ಮುತ್ಯಂ, ರುದ್ರವೀಣ, ಏಕ್ ದೂಜೇ ಕೇಲಿಯೇ ಚಿತ್ರಗಳ ಹಾಡುಗಳಿಗೆ ಬಾಲು ರಾಷ್ಟ್ರ ಪ್ರಶಸ್ತಿ ಪಡೆದಿದ್ದಾರೆ. ಪದ್ಮಶ್ರೀ,ಪದ್ಮಭೂಷಣ, ಹಲವು ಡಾಕ್ಟರೇಟ್ ಪದವಿಗಳು, ಸಾವಿರಾರು ಇನ್ನಿತರ ಗೌರವ ಪ್ರಶಸ್ತಿಗಳು ಅವರನ್ನು ಹುಡುಕಿಕೊಂಡು ಬಂದಿವೆ. ಎಸ್ ಪಿ ಬಿ ಅವರು ಹಾಡಿರುವ ಹಾಡುಗಳ ಸಂಖ್ಯೆ ೪೦,೦೦೦ಕ್ಕೂ ಹೆಚ್ಚು.

ವಿವಿಧ ಭಾಷೆಗಳ ಪರಿಧಿಯಲ್ಲಿ ಇಷ್ಟೊಂದು ಗೀತೆಗಳನ್ನು ಹಾಡಿರುವವರು ಇವರೊಬ್ಬರೇ. ಸಂಗೀತ ನಿರ್ದೇಶಕರಾಗಿ, ಹಲವಾರು ನಾಯಕರಿಗೆ ಕಂಠದಾನ ಮಾಡಿ ಕಲಾವಿದರಾಗಿ, ನಟರಾಗಿ, ನಿರ್ಮಾಪಕರಾಗಿ ಕೂಡಾ ಬಾಲು ಚಿತ್ರರಂಗದಲ್ಲಿ ಅಪಾರ ಸಾಧನೆ ಮಾಡಿದ್ದಾರೆ. ಹಾಸ್ಯ ಪಾತ್ರಗಳಿಗೆ ಹೇಳಿ ಮಾಡಿಸಿದಂತಹ ಶಾರೀರಿಕ ಭಾಷಾಭಿವ್ಯಕ್ತಿ ಅವರಲ್ಲಿರುವುದನ್ನು ಸುಲಭವಾಗಿ ಕಾಣಬಹುದಾಗಿದೆ.

ದೂರದರ್ಶನದಲ್ಲಿ ಒಂದು ದಶಕದಿಂದ ‘ಎದೆ ತುಂಬಿ ಹಾಡುವೆನು’ ಕಾರ್ಯಕ್ರಮವನ್ನು ನಡೆಸಿಕೊಡುತ್ತಿರುವಂತೆ, ಇತರ ಭಾಷೆಗಳಲ್ಲೂ ಅಂತದೇ ಕಾರ್ಯಕ್ರಮಗಳನ್ನು ಬಾಲಸುಬ್ರಹ್ಮಣ್ಯಂ ಅವರು ನಡೆಸುತ್ತಿದ್ದರು. ಅವರು ಪುಟ್ಟ ಮಕ್ಕಳಿಂದ ಹಿಡಿದು ಸಂಗೀತದ ದಿಗ್ಗಜಗಳವರೆಗೆ ಹಿರಿಯರು ಕಿರಿಯರು ಎಲ್ಲರನ್ನೂ ಗೌರವಪೂರ್ಣವಾಗಿ ನಡೆಸಿಕೊಳ್ಳುವುದನ್ನು ಕಾಣುವುದೇ ಒಂದು ಚೆಂದ ಎಂಬುದು ಅವರ ಅಭಿಮಾನಿ ವೀಕ್ಷಕರುಗಳಗಳ ನುಡಿ. ಈ ಎಲ್ಲ ನಿಟ್ಟಿನಲ್ಲಿ ಬಾಲಸುಬ್ರಹ್ಮಣ್ಯಂ ಒಬ್ಬ ನೈಜ ಸಾಂಸ್ಕೃತಿಕ ರಾಯಭಾರಿಯಾಗಿದ್ದರು.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights