ಕೋಶಿಯಾರಿ ಅವರು ಬಿಜೆಪಿ ಸಂಘ ಪ್ರಚಾರಕರಾಗಬೇಕಿತ್ತು, ರಾಜ್ಯಪಾಲರಾಗಿದ್ದಾರೆ: ಶಿವಸೇನಾ

ರಾಜ್ಯಪಾಲರು ಮಹಾರಾಷ್ಟ್ರ ರಾಜ್ಯ ಸರ್ಕಾರದ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದಾರೆ ಎಂದು ಆರೋಪಿಸಿರುವ ಶಿವಸೇನಾ, ರಾಜ್ಯಪಾಲ ಭಗತ್ ಸಿಂಗ್ ಕೋಶಿಯಾರಿ ಅವರು ಸಂಘ ಪ್ರಚಾರಕ ಅಥವಾ ಬಿಜೆಪಿ ನಾಯಕರಾಗಬೇಕಿತ್ತು ಎಂದು ಹೇಳಿದೆ.

ಕೊರೋನಾ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಬಂದ್ ಮಾಡಲಾಗಿದ್ದ ದೇವಸ್ಥಾನಗಳನ್ನು ಮತ್ತೆ ತೆರೆಯುವ ವಿಚಾರವಾಗಿ ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ಪತ್ರ ಬರೆದಿದ್ದ ರಾಜ್ಯಪಾಲರು, ನೀವು “ಜಾತ್ಯತೀತ ಅನಿಸಿಕೊಳ್ಳಲು ಹಿಂದುತ್ವವನ್ನು ತ್ಯಜಿಸಿದರೇ” ಎಂದು ಪ್ರಶ್ನಿಸಿದ್ದರು. ಈ ಬಗ್ಗೆ ಉದ್ದವ್ ಠಾಕ್ರೆ ಮತ್ತು ರಾಜ್ಯಪಾಲರ ನಡುವೆ ಪತ್ರ ಸಮರ ನಡೆದಿತ್ತು. ಈ ಬಗ್ಗೆ ಪ್ರತಿಕ್ರಿಯಿಸಿರುವ ಶಿವಸೇನಾ, ತನ್ನ ಪತ್ರಿಕೆ ಸಾಮ್ನಾದಲ್ಲಿ ರಾಜ್ಯಪಾಲರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ.

ರಾಜ್ಯಪಾಲರ ಹುದ್ದೆಯಲ್ಲಿ ಕುಳಿತಿರುವ ವ್ಯಕ್ತಿ ಹೇಗೆ ವರ್ತಿಸಬಾರದು ಎಂಬುದನ್ನು ಭಗತ್ ಸಿಂಗ್ ಕೋಶಿಯಾರಿ ಅವರು ತೋರಿಸಿಕೊಟ್ಟಿದ್ದಾರೆ. ಸಂಘ ಪ್ರಚಾರಕ ಅಥವಾ ಬಿಜೆಪಿ ನಾಯಕರಾಗಬೇಕಿದ್ದ ಅವರು ಮಹಾರಾಷ್ಟ್ರದಂತಹ ಪ್ರಗತಿಪರ ರಾಜ್ಯದ ರಾಜ್ಯಪಾಲರಾಗಿದ್ದಾರೆ. ಅವರು ತಮ್ಮ ಅನುಕೂಲಕ್ಕೆ ತಕ್ಕಂತೆ ವರ್ತಿಸುತ್ತಿದ್ದು, ರಾಜ್ಯಪಾಲರು ಎಂಬುದನ್ನು ಮರೆತಂದಿದೆ ಎಂದು ಸಾಮ್ನಾ ಪತ್ರಿಕೆಯ ಸಂಪಾದಕೀಯದಲ್ಲಿ ಬರೆದಿದೆ.

ಇದನ್ನೂ ಓದಿ: ಉದ್ದವ್ ಠಾಕ್ರೆಯ ವ್ಯಂಗ್ಯ ಕಾರ್ಟೂನ್‌ ಶೇರ್‌ ಮಾಡಿದ್ದಕ್ಕಾಗಿ ನೌಕಾಪಡೆಯ ನಿವೃತ್ತ ಅಧಿಕಾರಿಯ ಮೇಲೆ ಹಲ್ಲೆ!

ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರಿಗೆ ರಾಜ್ಯಪಾಲ ಕೋಶಿಯಾರಿ ಬರೆದ ಪತ್ರ ಅವಿವೇಕದ ನಡೆಯಾಗಿದೆ. ಅವರನ್ನು ಹಿಂದಕ್ಕೆ ಕರೆದುಕೊಳ್ಳಬೇಕು ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.

ಬಿಜೆಪಿ ಹಾಗೂ ಸಂಘ ಸಂಸ್ಥೆಗಳ ಮನವಿಯ ನಂತರವೂ ದೇವಾಲಯಗಳನ್ನು ತೆರೆಯದ ಸರ್ಕಾರದ ನಿಲುವಿನ ಕುರಿತು ಉದ್ಧವ್ ಠಾಕ್ರೆಗೆ ಪತ್ರ ಬರೆದಿದ್ದ ರಾಜ್ಯಪಾಲ ಕೋಶಿಯಾರಿ ಅವರು, ರಾಜ್ಯ ಸರ್ಕಾರ ದೇವಸ್ಥಾನಗಳನ್ನು ತೆರೆಯಲು ವಿಳಂಬ ಧೋರಣೆ ಅನುಸರಿಸುತ್ತಿದೆ.  ಠಾಕ್ರೆ ಅವರು “ಜಾತ್ಯತೀತ ಅನಿಸಿಕೊಳ್ಳಲು ಹಿಂದುತ್ವವನ್ನು ತ್ಯಜಿಸಿದರೇ” ಎಂದು ಲೇವಡಿ ಮಾಡಿದ್ದರು. ಇದಕ್ಕೆ ತೀಕ್ಷಣವಾಗಿಯೇ ಪ್ರತಿಕ್ರಿಯಿಸಿದ್ದ ಸಿಎಂ ಠಾಕ್ರೆ, ಜಾತ್ಯತೀತ ಎಂಬುದು ಸಂವಿಧಾನದ ಭಾಗ. ನೀವು ರಾಜ್ಯಪಾಲರಾಗಿ ಸಂವಿಧಾನಕ್ಕೆ ನಿಷ್ಠೆಯಿಂದ ಇರುವುದಾಗಿ ಪ್ರಮಾಣ ಮಾಡಿದ್ದೀರಿ. ಹಿಂದುತ್ವದ ಬಗ್ಗೆ ಉಪದೇಶ ಮಾಡಬೇಡಿ ಎಂದು ತಿರುಗೇಟು ನೀಡಿದ್ದರು.


ಇದನ್ನೂ ಓದಿ: ದೇವೇಗೌಡರನ್ನು ಮಣಿಸಿದಂತೆಯೇ ಮುನಿರತ್ನರನ್ನು ಸೋಲಿಸಲು ಡಿಕೆಶಿ ತಂತ್ರ: ಏನುದು ಪ್ಲಾನ್‌?

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights