ಪ್ರವಾಹ: ತೆಲಂಗಾಣ ರಾಜ್ಯಕ್ಕೆ 15 ಕೋಟಿ ನೆರವು ಘೋಷಿಸಿದ ದೆಹಲಿ ಸರ್ಕಾರ!

ಕೆಲವು ದಿನಗಳಿಂದ ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈಗಾಗಲೇ ಕೊರೊನಾದಿಂದ ಕಂಗೆಟ್ಟಿರುವ ಜನರಿಗೆ ಪ್ರವಾಹ ಮತ್ತಷ್ಟು ಹೊಡೆತ ತಂದೊಡ್ಡಿದೆ. ಆರ್ಥಿಕವಾಗಿ ತತ್ತರಿಸಿರುವ ತಲಂಗಾಣ ರಾಜ್ಯಕ್ಕೆ 15 ಕೋಟಿ ಹಣ ಸಹಾಯ ಮಾಡುವುದಾಗಿ ದೆಹಲಿ ಸರ್ಕಾರ ಘೋಷಿಸಿದೆ.

ಈ ಬಗ್ಗೆ ದೆಹಲಿ ಸಿಎಂ ಅರವಿಂದ ಕೇಜ್ರಿವಾಲ್ ಟ್ವೀಟ್​ ಮಾಡಿದ್ದು, “ಹೈದರಾಬಾದ್‌ನಲ್ಲಿ ಹಿಂದೆಂದೂ ಕಾಣದ ಭೀಕರ ಪ್ರವಾಹ ಉಂಟಾಗಿದೆ. ಈ ಬಿಕ್ಕಟ್ಟಿನ ಸಮಯದಲ್ಲಿ ದೆಹಲಿಯ ಜನರು ಹೈದರಾಬಾದ್‌ನ ನಮ್ಮ ಸಹೋದರ ಸಹೋದರಿಯರೊಂದಿಗೆ ನಿಲ್ಲಲಿದ್ದಾರೆ. ಪರಿಹಾರ ಕಾರ್ಯಗಳಿಗಾಗಿ ದೆಹಲಿ ಸರ್ಕಾರವು ತೆಲಂಗಾಣ ಸರ್ಕಾರಕ್ಕೆ 15 ಕೋಟಿ ರೂ ದೇಣಿಗೆ ನೀಡಲಿದೆ” ಎಂದು ಘೋಷಿಸಿದ್ದಾರೆ.

ಕೇಜ್ರಿವಾಲ್‌ರವರ ಈ ಮಾನವೀಯ ನಡೆಯನ್ನು ಸಾಮಾಜಿಕ ಜಾಲತಾಣದಲ್ಲಿ ಅನೇಕರು ಪ್ರಶಂಶಿಸಿದ್ದರೆ, ಇನ್ನೂ ಕೆಲವರು ತೀವ್ರ ಟೀಕೆಗೆ ಗುರಿಮಾಡಿದ್ದಾರೆ.


ಇದನ್ನೂ ಓದಿ: ಐಟಂ’‌ ಹೇಳಿಕೆ ದುರದೃಷ್ಟಕರ ಎಂದ ರಾಹುಲ್‌ಗಾಂಧಿ‌; ಕ್ಷಮೆ ಕೇಳಲ್ಲ ಎಂದ ಕಮಲ್‌ನಾಥ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights