ಮಹಾನಾಯಕ’ನಿಗೆ ಅತ್ಯುನ್ನತ ಧಾರಾವಾಹಿ ಪ್ರಶಸ್ತಿ!

ಇತ್ತೀಚೆಗೆ ಕರ್ನಾಟಕದ ಜನರ ಮನೆಮಾತಾಗಿರುವ ಮಹಾನಾಯಕ ಧಾರಾವಾಹಿ ಕನ್ನಡ ಧಾರಾವಾಹಿಗಳ ಲೋಕದಲ್ಲಿ ಹೊಸ ದಾಖಲೆಯನ್ನೆ ನಿರ್ಮಿಸಿದೆ. ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗಿ ರಾಜ್ಯದಾದ್ಯಂತ ಜನಮನ್ನಣೆ ಗಳಿಸುತ್ತಿರುವ ಡಾ.ಬಿ.ಆರ್.ಅಂಬೇಡ್ಕರ್ ರವರ ಜೀವನಾಧಾರಿತ “ಮಹಾನಾಯಕ” ಧಾರಾವಾಹಿಗೆ ಡಬ್ಬಿಂಗ್ ವಿಭಾಗದಲ್ಲಿ ಜೀ ಕುಟುಂಬ ಪ್ರಶಸ್ತಿ ಲಭಿಸಿದೆ.

ಶನಿವಾರ ನಡೆದ ಕಾರ್ಯಕ್ರಮದಲ್ಲಿ ಈ ಪ್ರಶಸ್ತಿಯನ್ನು ಘೋಷಿಸಲಾಗಿದೆ. ಮುಂದಿನ ವಾರ ಇದರ ಪ್ರಸಾರ ಮಾಡಲಾಗುತ್ತದೆ ಎಂದು ಜೀ ಕನ್ನಡದ ಅನಿಲ್‌ಕುಮಾರ್.ಜೆ ತಿಳಿಸಿದರು.

ಜೀ ಟಿವಿ ಕನ್ನಡದಲ್ಲಿ ಪ್ರತಿ ಶನಿವಾರ ಮತ್ತು ಭಾನುವಾರ ಪ್ರಸಾರವಾಗುತ್ತಿರುವ ಈ ಧಾರಾವಾಹಿ ಅತ್ಯಂತ ಜನಪ್ರಿಯತೆ ಪಡೆದುಕೊಂಡಿದೆ. ಒಂದು ವಾರ ಕಾರಣಾಂತರಗಳಿಂದ ಧಾರವಾಹಿ ಪ್ರಸಾರವಾಗೇ ಇದ್ದಾಗ ಸಾವಿರಾರು ಜನ ಆಕ್ರೋಶ ವ್ಯಕ್ತಪಡಿಸುವ ಮಟ್ಟಿದೆ ಇದು ಜನರ ಮನಗೆದ್ದಿದೆ. ಕರ್ನಾಟಕದಾದ್ಯಂತ ಹಲವಾರು ಹಳ್ಳಿಗಳಲ್ಲಿ ಧಾರಾವಾಹಿ ಮತ್ತು ಅಂಬೇಡ್ಕರ್‌ರವರ ಬ್ಯಾನರ್ ಹಾಕಿ ಲಕ್ಷಾಂತರ ಜನ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.


ಇದನ್ನು ಓದಿ: “ಮಹಾನಾಯಕ” ಧಾರವಾಹಿ ಪ್ರಸಾರ ನಿಲ್ಲಿಸುವಂತೆ ಬೆದರಿಕೆ: ರಾಘವೇಂದ್ರ ಹುಣಸೂರು

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights