ಕಾಂಗ್ರೆಸ್‌ & ಬಿಜೆಪಿ ಆಡಳಿತದಲ್ಲಿ ಸರ್ಕಾರಗಳ ಸಾಲ ಪ್ರಮಾಣ ಎ‍ಷ್ಟು? ಸಿದ್ದರಾಮಯ್ಯ ಹೇಳಿದ್ದೇನು?

ಸುಳ್ಳು ಅಂಕಿ ಅಂಶಗಳನ್ನು ನೀಡುತ್ತಾ ಜನರನ್ನು ಹಾದಿ ತಪ್ಪಿಸುತ್ತಿರುವ BJP ಪಕ್ಷಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಅದೇ ಅಂಕಿ ಅಂಶಗಳ ಮೂಲಕ ತಕ್ಕ ಉತ್ತರ ನೀಡಿದ್ದಾರೆ..  ತಮ್ಮ ಆಡಳಿತಾವಧಿಯಲ್ಲಿ ರಾಜ್ಯದ ಆರ್ಥಿಕ ಸ್ಥಿತಿಯ ಬಗ್ಗೆ ಬಿಜೆಪಿಯ ಸುಳ್ಳಿನ ಸರಮಾಲೆಯ ಬಲೂನನ್ನು ಮಾಜಿ ಸಿದ್ದು ಪಂಕ್ಚರ್ ಮಾಡಿದ್ದಾರೆ.

ನಾನು ಮುಖ್ಯಮಂತ್ರಿಯಾಗಿದ್ದ ಐದು ವರ್ಷಗಳ ಅವಧಿಯಲ್ಲಿ ರಾಜ್ಯದ ಜನರ ತಲೆ ಮೇಲೆ ಸಾಲದ ಹೊರೆ ಹೊರಿಸಿದ್ದೇನೆ ಎಂದು ಬಿಜೆಪಿ ಆರೋಪಿಸಿದೆ. ನಿರಾಧಾರವಾಗಿರುವ ಅಂಕಿ-ಅಂಶಗಳನ್ನು ಹುಟ್ಟುಹಾಕಿ ರಾಜ್ಯದ ಜನತೆಯ ಹಾದಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕಾಂಗ್ರೆಸ್ ಮತ್ತು ಬಿಜೆಪಿಯ ತಲಾ ಐದು ವರ್ಷಗಳ ಆಡಳಿತಾವಧಿಯ ಹಣಕಾಸು ಸ್ಥಿತಿ ಬಗ್ಗೆ ಸಾರ್ವಜನಿಕವಾಗಿ ಚರ್ಚೆ ಏರ್ಪಡಿಸಿ ಸ್ಥಳ ಸಮಯ ತಿಳಿಸಿದರೆ ನಾನು ಬಂದು ಅದರಲ್ಲಿ ಭಾಗವಹಿಸುತ್ತೇನೆ ಎಂದು ಸಿದ್ದರಾಮಯ್ಯ ಪಂಥಾಹ್ವಾನ ನೀಡಿದ್ದಾರೆ.

2008-09ರಿಂದ 2013-14ರ ವರೆಗಿನ ಬಿಜೆಪಿ ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಸಾಲದ ಪ್ರಮಾಣ ಶೇಕಡಾ 212ರಷ್ಟು ಹೆಚ್ಚಿತ್ತು. 2013-14ರಿಂದ 2018-19ರ ನಮ್ಮ ಸರ್ಕಾರದ ಅವಧಿಯಲ್ಲಿ ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 65ರಷ್ಟು ಮಾತ್ರ.

2008ರಿಂದ 2013-14ರ ಅವಧಿಯಲ್ಲಿ ರಾಜ್ಯದ ಒಟ್ಟು ಸಾಲದ ಹೊರೆ ಶೇಕಡಾ 94.18ರಷ್ಟು ಹೆಚ್ಚಿತ್ತು. ಆದರೆ 2013-14ರಿಂದ 2018-19ರ ಅವಧಿಯಲ್ಲಿ ಒಟ್ಟು ಸಾಲದ ಪ್ರಮಾಣ ಹೆಚ್ಚಿದ್ದು ಕೇವಲ ಶೇಕಡಾ 78.19ರಷ್ಟು ಮಾತ್ರ ಎಂದು ಬಿಜೆಪಿಯಯ ಮಿಥ್ಯಾರೋಪವನ್ನು ಸಿದ್ದು ತಳ್ಳಿಹಾಕಿದ್ದಾರೆ.


ಇದನ್ನೂ ಓದಿ: ಪ್ರವಾಹ: 11 ವರ್ಷಗಳಲ್ಲಿ ರಾಜ್ಯಕ್ಕೆ ಕೇಂದ್ರ ಕೊಟ್ಟ ಪರಿಹಾರ 11,495 ಕೋಟಿ ಮಾತ್ರ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights