ಅಧಿಕೃತವಾಗಿ ನ್ಯಾಯಾಲಯದಿಂದ ನನಗೆ ಯಾವುದೇ ನೋಟೀಸ್ ಬಂದಿಲ್ಲಾ-ಸಂಸದ ಪ್ರಜ್ವಲ್

ಚುನಾವಣೆಗೆ ಸುಳ್ಳು ಪ್ರಮಾಣಪತ್ರ ಅರ್ಜಿ ಸಂಭಂದ ನ್ಯಾಯಾಲಯದಲ್ಲಿ ವಿಚಾರಣೆ ವಿಚಾರಕ್ಕೆ ಅಧಿಕೃತವಾಗಿ ನ್ಯಾಯಾಲಯದಿಂದ ನನಗೆ ಯಾವುದೇ ನೋಟೀಸ್ ಬಂದಿಲ್ಲಾ ಎಂದು ಹಾಸನದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಹೇಳಿದ್ದಾರೆ.

ನೋಟೀಸ್ ಬಂದರೆ ನಾನು ಹಾಜರಾಗುತ್ತೇನೆ. ಕಾನೂನಿಗಿಂತ ನಾನು ದೊಡ್ಡವನಲ್ಲಾ. ನ್ಯಾಯಾಲಯದಲ್ಲಿ ನನಗೆ ನ್ಯಾಯ ಸಿಗಲಿದೆ ಎಂದಿದ್ದಾರೆ.

ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ವರದಿ ನೀಡಿದರೂ ಕೇಂದ್ರ ಸರ್ಕಾರ ಅನುದಾನ ನೀಡಿಲ್ಲಾ. ರಾಜ್ಯಕ್ಕೆ ಕೇಂದ್ರದಿಂದ ಅನ್ಯಾಯವಾಗಿದೆ. ಹುಣಸೂರಿನಲ್ಲಿ ನಾನು ಸ್ಪರ್ಧೆ ಮಾಡೊಲ್ಲಾ, ಸ್ಥಳೀಯ ಕಾರ್ಯಕರ್ತನಿಗೆ ಟಿಕೇಟ್ ಕೊಡುತ್ತೇವೆ. ಮಹಾಲಕ್ಷ್ಮಿ ಲೇಔಟ್, ಕೆಆರ್ ಪೇಟೆ, ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿಗಳನ್ನ ಗೆಲ್ಲುಸಲು ಪ್ರಯತ್ನ ಮಾಡುತ್ತೇವೆ ಎಂದರು.

 

 

Leave a Reply

Your email address will not be published.