ಕಾರು-ಲಾರಿ ಡಿಕ್ಕಿ : ಅಪಘಾತದಲ್ಲಿ RTO ಇನ್ಸ್‌ಪೆಕ್ಟರ್ ಸಾವು….!

ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ವ್ಯಾಸರಾಜಪುರ ಬಳಿ ಕಾರು ಮತ್ತು ಲಾರಿ ನಡುವೆ ಅಪಘಾತ ಸಂಭವಿಸದ್ದು ಘಟನೆಯಲ್ಲಿ ಚಾಮರಾಜನಗರದ RTO ಇನ್ಸ್‌ಪೆಕ್ಟರ್ ಸಾವನ್ನಪ್ಪಿದ್ದಾರೆ. ಅಬ್ದುಲ್ ನಜೀಂ ಮೃತ(50) ಮೃತ ದುರ್ದೈವಿ. ಅಪಘಾತದಲ್ಲಿ ಚಾಲಕನಿಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಅಪಘಾತ ನಂತರ ಆಸ್ಪತ್ರೆಗೆ ತೆರಳುವ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದಾರೆ.

ಮಂಡ್ಯಾದಲ್ಲಿ ಕೋರ್ಟ್ ಕಲಾಪ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ಅಪಘಾತ ಸಂಬಂವಿಸಿದ್ದು ಅಪಘಾತದ ತೀವ್ರತೆಗೆ ಸಂಪೂರ್ಣವಾಗಿ ಕಾರು ನಜ್ಜುಗುಜ್ಜಾಗಿದೆ. RTO ಇನ್ಸ್‌ಪೆಕ್ಟರ್ ಅಬ್ದುಲ್ ನಜೀಂ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಅಪಘಾತಕ್ಕೆ ಲಾರಿ ಚಾಲಕನ ಅತಿಯಾದ ವೇಗವೇ ಕಾರಣ ಎಂದು ಸ್ಥಳೀಯರ ಆರೋಪ ಮಾಡಿದ್ದಾರೆ.

ಬನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ವಿಚಾರಣೆ ಮಾಡಲಾಗುತ್ತಿದೆ.

 

Leave a Reply