ಕ್ಷೇತ್ರಗಳ ಗೆಲುವಿಗಾಗಿ ಕನಕಪುರ ಬಂಡೆ ಭರ್ಜರಿ ಪ್ಲಾನ್ : ಟ್ರಬಲ್ ಶೂಟರ್ ಚುನಾವಣಾ ತಂತ್ರವೇನು..?

ಕಾಂಗ್ರೆಸ್ ನ ಟ್ರಬಲ್ ಶೂಟರ್ ಡಿ.ಕೆ.ಶಿವಕುಮಾರ್ 15 ಕ್ಷೇತ್ರಗಳ ಪೈಕಿ 4 ಕ್ಷೇತ್ರಗಳ ಗೆಲುವಿಗಾಗಿ ಭರ್ಜರಿ ಪ್ಲಾನ್ ನಡೆಸಿದ್ದಾರೆ ಎನ್ನಲಾಗಿದೆ.

15 ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದ್ದು, ಡಿ.ಕೆ.ಶಿವಕುಮಾರ್ 4 ವಿಧಾನಸಭಾ ಕ್ಷೇತ್ರಗಳ ಗೆಲುವಿನ ಮೇಲೆ ಕಣ್ಣಿಟ್ಟಿದ್ದಾರೆ. ಒಂದೊಂದು ಕ್ಷೇತ್ರದಲ್ಲೂ ತಲಾ 50 ಹುಡುಗರ ಡಿಕೆಶಿವಕುಮಾರ್ ಟೀಂ ಕೆಲಸ ಮಾಡುತ್ತಿದ್ದು, ಕ್ಷೇತ್ರದ ಇಂಚಿಂಚೂ ಮಾಹಿತಿ ಟ್ರಬಲ್ ಶೂಟರ್ ಕೈ ತಲುಪುತ್ತಿದೆ.

ಮೈತ್ರಿ ಸರ್ಕಾರದ ಪತನಕ್ಕೆ ಪ್ರಮುಖವಾಗಿ ಕಾರಣರಾದ ಎಂ.ಟಿ.ಬಿ.ನಾಗರಾಜ್, ರಮೇಶ್ ಜಾರಕಿಹೊಳಿ, ಎಸ್.ಟಿ. ಸೋಮಶೇಖರ್ ಹಾಗೂ ಸುಧಾಕರ್ ಅವರನ್ನು ಸೋಲಿಸಲು ಡಿಕೆಶಿ ಪಣ ತೊಟ್ಟಿದ್ದಾರೆ ಎನ್ನಲಾಗಿದ್ದು, ಹೊಸಕೋಟೆ, ಗೋಕಾಕ್, ಯಶವಂತಪುರ ಮತ್ತು ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಲು ಡಿಕೆಶಿ ಚುನಾವಣಾ ತಂತ್ರಗಳನ್ನು ಪ್ರಯೋಗಿಸುತ್ತಿದ್ದಾರೆ ಎನ್ನಲಾಗಿದೆ.

Leave a Reply

Your email address will not be published.