ಗಾರ್ಮೆಂಟ್ಸ್ ಗೆ ಮಹಿಳಾ ಸಿಬ್ಬಂದಿ ಕರೆದದೋಯ್ಯೂತ್ತಿದ್ದ ವಾಹನ ಪಲ್ಟಿ…..! : ೩೦ ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

ಗಾರ್ಮೆಂಟ್ಸ್ ಗೆ ಮಹಿಳಾ ಸಿಬ್ಬಂದಿ ಕರೆದದೋಯ್ಯೂತ್ತಿದ್ದ ವಾಹನ ಪಲ್ಟಿಯಾದ ಘಟನೆ ಮಂಡ್ಯದ ಮದ್ದೂರು ತಾಲೂಕಿನ ಹಾಗಲಹಳ್ಳಿ ಗ್ರಾಮದ ಬಳಿ ನಡೆದಿದೆ.

ಮದ್ದೂರು ತಾಲೂಕಿನ ಸುತ್ತಮುತ್ತಲ ಗ್ರಾಮಗಳಿಂದ ಸೋಮನಹಳ್ಳಿ ಗಾರ್ಮೆಂಟ್ಸ್ ಗೆ ಸಿಬ್ಬಂದಿಗಳನ್ನು ಕರೆದೊಯ್ಯುತ್ತಿದ್ದ ವಾಹನ ಪಲ್ಟಿಯಾಗಿ ೩೦ ಕ್ಕೂ ಹೆಚ್ಚು ಜನರಿಗೆ ಗಾಯ, ಹಲವರಿಗೆ ಗಂಭೀರ ಪೆಟ್ಟಾಗಿದೆ.

ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಜಮೀನಿನಲ್ಲಿ ವಾಹನ ಪಲ್ಟಿಯಾಗಿ ಬಿದ್ದಿದೆ. ವಾಹನ ಪಲ್ಟಿಯಾದ ರಬಸಕ್ಕೆ ವಾಹನದಲ್ಲಿದ್ದವರಿಗೆ ಗಂಭೀರ ಗಾಯಗಳಾಗಿವೆ. ಗಾಯಾಳುಗಳಿಗೆ ಮದ್ದೂರು ಆಸ್ಪತ್ರೆಯಲ್ಲಿ ಚಿಕಿತ್ಸೆ, ಗಂಭೀರ ಗಾಯಗೊಂಡವರು ಮಿಮ್ಸ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ಮದ್ದೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ವಿಚಾರಣೆ ನಡೆಸಿದ್ದಾರೆ.

Leave a Reply