ಫೋನ್ ಕದ್ದಾಲಿಕೆ ಪ್ರಕರಣ ಸಿಬಿಐ ತನಿಖೆಗೆ…

ಫೋನ್ ಕದ್ದಾಲಿಕೆ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಲು ಸರ್ಕಾರ ಮುಂದಾಗಿದೆ. ಬಹಳ ಗಂಭೀರವಾಗಿ ಈ ಪ್ರಕರಣವನ್ನು ಸರ್ಕಾರ ತೆಗೆದುಕೊಂಡಿದ್ದು ಸಿಬಿಐಗೆ ವಹಿಸಲಾಗುವುದು ಎಂದು ಮುಖ್ಯಮಂತ್ರಿ ಯಡಿಯೂರಪ್ಪನವರು ತಿಳಿಸಿದ್ದಾರೆ.

ಕ್ಯಾಬಿನೆಟ್ ರಚಿಸಲು ತೆರಳಿದ್ದ ಯಡಿಯೂರಪ್ಪನವರ ಜೊತೆ ಅಮಿತ್ ಶಾ ಈ ವಿಚಾರದ ಬಗ್ಗೆ ಬಹಳ ಗಂಭೀರ ಚರ್ಚೆ ನಡೆಸಿದ್ದಾರೆ. ಹೀಗಾಗಿ ಸಿಬಿಐ ತನಿಖೆ ನಡೆಸಲು ಸರ್ಕಾರ ಮುಂದಾಗಿದೆ.

ಫೋನ್ ಟ್ಯಾಪಿಂಗ್ ವಿಚಾರ ಬಂದಾಗ ಸಿದ್ದರಾಮಯ್ಯನವರೇ ಈ ಬಗ್ಗೆ ತನಿಖೆ ನಡೆಸಬೇಕೆಂದು ಆಗ್ರಹಿಸಿದ್ದರು. ಆದರೆ ಡಿಕೆ ಶಿವಕುಮಾರ್ ಅವರು ಫೋನ್ ಕದ್ದಾಲಿಕೆ ನಡೆದಿಲ್ಲ ಎಂದು ತಿಳಿಸಿದ್ದರು.ಕುಮಾರಸ್ವಾಮಿ ಅವರು ಸರ್ಕಾರ ಉಳಿಸಲು ಪೊಲೀಸ್ ಅಧಿಕಾರಿಗಳ ಮೂಲಕ ಫೋನ್ ಟ್ಯಾಪಿಂಗ್ ಮಾಡುತ್ತಿದ್ದಾರೆ. ಸಿದ್ದರಾಮಯ್ಯನವರ ಕರೆಯನ್ನು ಟ್ಯಾಪ್ ಮಾಡಲಾಗಿದೆ. ಕುಮಾರಸ್ವಾಮಿ ಅವರಿಗೆ ಅವರ ಸಂಪುಟದ ಸಹೋದ್ಯೋಗಿಗಳ ಜೊತೆ ಸಂದೇಹವಿತ್ತು. ಹೀಗಾಗಿ ಹಿಂದಿನ ಸರ್ಕಾರ ಫೋನ್ ಟ್ಯಾಪಿಂಗ್ ಮಾಡಿತ್ತು ಎಂದು ಆರ್. ಅಶೋಕ್ ಆರೋಪಿಸಿದ್ದರು.

ಮುಖ್ಯಮಂತ್ರಿ ಅಧಿಕಾರ ಶಾಶ್ವತವಲ್ಲ ಎಂದು ಪದೇ ಪದೇ ಹೇಳುತ್ತಿದ್ದವನು ನಾನು. ಈ ಕುರ್ಚಿಗಾಗಿ ಟೆಲಿಫೋನ್  ಕದ್ದಾಲಿಕೆ ಮಾಡಿ ಅಧಿಕಾರ ಉಳಿಸಿಕೊಳ್ಳುವ ಅವಶ್ಯಕತೆ ನನಗಿರಲಿಲ್ಲ. ಈ ವಿಚಾರದಲ್ಲಿ ಕೆಲವರು ನನ್ನ ವಿರುದ್ಧ ಮಾಡಿರುವ ಆರೋಪ ಸತ್ಯಕ್ಕೆ ದೂರವಾದದ್ದು ಎಂದು ಕುಮಾರಸ್ವಾಮಿ ಟ್ವೀಟ್ ಮಾಡಿ ತಿಳಿಸಿದ್ದರು.

Leave a Reply

Your email address will not be published.