ಬಾಗಲಕೋಟೆಯಲ್ಲಿ ಮಲಪ್ರಭಾ ನದಿ ಪ್ರವಾಹ : ರಸ್ತೆ, ಮನೆ, ಸಾವಿರಾರು ಎಕರೆ ಬೆಳೆ ಜಲಾವೃತ – ವಿಡಿಯೋ ನೋಡಿ

ಬಾಗಲಕೋಟೆ ಜಿಲ್ಲೆಯಲ್ಲಿ ಶುರುವಾಯ್ತು ಮಲಪ್ರಭಾ ನದಿ ಪ್ರವಾಹ. ನದಿ ಪ್ರವಾಹ ಹಿನ್ನೆಲೆಯಲ್ಲಿ ಗೋವನಕೊಪ್ಪ ಗ್ರಾಮಕ್ಕೆ ನೀರು ನುಗ್ಗಿದೆ. ಪರಿಣಾಮ ಹಲವು ಮನೆಗಳು, ದೇಗುಲಗಳು ಜಲಾವೃತಗೊಂಡಿವೆ. ಹಲವಾರು ಕುಟುಂಬಗಳು ಬೀದಿಪಾಲಾಗಿವೆ.  ರಸ್ತೆಗಳೆಲ್ಲಾ,  ಸಾವಿರಾರು ಎಕರೆ ಬೆಳೆ ಜಲಾವೃತವಾಗಿದ್ದು ನದಿ ತೀರದ ಜನ ಆತಂಕದಲ್ಲಿದ್ದಾರೆ.

ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಗೋವನಕೊಪ್ಪ ಗ್ರಾಮ ಸಂಪೂರ್ಣವಾಗಿ ಜಲಾವೃತವಾಗಿದೆ. ಘಟಪ್ರಭಾ ನದಿ ಪ್ರವಾಹ ಪೀಡಿತ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ, ಜಿಲ್ಲಾಧಿಕಾರಿ ಭೇಟಿ ನೀಡಿದ್ದಾರೆ.

ಅಧಿಕಾರಿಗಳ ಬಳಿ ನಿರಾಶ್ರಿತರು ಗೋಳು ತೋಡಿಕೊಂಡಿದ್ದಾರೆ.

ಅಧಿಕಾರಿಗಳೂ ಕೂಡ ನಿಮಗೆ ಶಾಶ್ವತ ಮನೆ ಕಟ್ಟಿಕೊಡುವುದಾಗಿ, ಸರ್ಕಾರದಿಂದ ಎಲ್ಲಾ ವ್ಯವಸ್ಥೆ ಕಲ್ಪಿಸ್ತೀವಿ ಎಂದು ಭರವಸೆ ನೀಡಿದ್ದಾರೆ.

ಬಾಗಲಕೋಟೆ ಜಿಲ್ಲೆ ಮುಧೋಳ ನಗರ‌ದ ನದಿ ತೀರದ ಜನ್ರಿಗೆ ಸುರಕ್ಷಿತ ಸ್ಥಳಕ್ಕೆ ಬರುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

 

Leave a Reply