ಮೈಸೂರು ಅರಮನೆಯಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮ : ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ

ಮೈಸೂರು ದಸರಾ ಯಶಸ್ವಿಯಾಗಿ ಪೂರ್ಣಗೊಂಡಿದೆ. ಭಾಗಶ: ಕಾರ್ಯಕ್ರಮಗಳು ಪೂರ್ಣಗೊಂಡಿದ್ದು, ಇಂದು ರಾಷ್ಟ್ರಪತಿಗಳ ಕಾರ್ಯಕ್ರಮ ಆಯೋಜಿಸಲಾಗಿದೆ.

ಇಂದು ಮೈಸೂರು ಅರಮನೆಯಲ್ಲಿ ರಾಷ್ಟ್ರಪತಿಗಳ ಕಾರ್ಯಕ್ರಮ ಹಿನ್ನೆಲೆ, ಅರಮನೆಗೆ ಮಧ್ಯಾಹ್ನದಿಂದ ಪ್ರವಾಸಿಗರ ಪ್ರವೇಶಕ್ಕೆ‌ ನಿರ್ಬಂಧ ವಿಧಿಸಲಾಗಿದೆ ಎಂದು ಅರಮನೆ ಮಂಡಳಿ ಉಪ ನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯರಿಂದ ಮಾಹಿತಿ ನೀಡಿದ್ದಾರೆ.

ರಾಷ್ಟ್ರಪತಿಗಳು ಜಯಚಾಮರಾಜ ಒಡೆಯರ್ ಜನ್ಮ ಶತಮಾನೋತ್ಸವ ಕಾರ್ಯಕ್ರದಲ್ಲಿ ಭಾಗವಹಿಸುತ್ತಿರುವುದರಿಂದ ಮಧ್ಯಾಹ್ನ 2ರ ನಂತರ ಸಾರ್ವಜನಿಕರು ಪ್ರವಾಸಿಗರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.
.

Leave a Reply