ಮ್ಯಾಚ್ ಫಿಕ್ಸಿಂಗ್ ಹಗರಣದ ಆರೋಪದ ಹಿನ್ನೆಲೆಯಲ್ಲಿ ದಕ್ಷಿಣ ಆಫ್ರಿಕಾದ ಮಾಜಿ ಬ್ಯಾಟ್ಸ್ ಮೆನ್ ಗುಲಾಮ್ ಬೋಡಿ 5 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದಾರೆ.

ದಕ್ಷಿಣ ಆಫ್ರಿಕಾ ಪರ ಮೂರು ಏಕದಿನ ಪಂದ್ಯಗಳನ್ನು ಆಡಿರುವ ಗುಲಾಮ್ ಬೋಡಿ, 2015 ರ ದೇಶಿ ಟಿ20 ಕ್ರಿಕೆಟ್ ಟೂರ್ನಿಯ ಪಂದ್ಯಗಳನ್ನು ಫಿಕ್ಸ್ ಮಾಡುವ ಪ್ರಯತ್ನ ನಡೆಸಿ ಸಿಕ್ಕಿಬಿದ್ದಿದ್ದರು.

ಈ ಪ್ರಕರಣ ಸಂಬಂಧ ದಕ್ಷಿಣ ಆಫ್ರಿಕಾ ಕ್ರಿಕೆಟ್ ಮಂಡಳಿ 20 ವರ್ಷಗಳ ಕಾಲ ಕ್ರಿಕೆಟ್ ಆಡದಂತೆ ಬೋಡಿಗೆ ನಿಷೇಧ ಹೇರಿತ್ತು.