ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ನಿರ್ಧಾರಿಸಿದ ಬಿ.ಎನ್.ಬಚ್ಚೇಗೌಡ….!

ಹೊಸಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣೆ ಕಾವು ರಂಗೇರಿದೆ. ಸಂಸದ ಬಿ.ಎನ್.ಬಚ್ಚೇಗೌಡ ರ ಬದ್ಧ ವೈರಿ ಎಂ.ಟಿ.ಬಿ. ನಾಗರಾಜ್‌ ಗೆ ಬಿಜೆಪಿ ಟಿಕೆಟ್ ನೀಡಲಾಗಿದ್ದು ಗೌಡರಿಗೆ ಇದು ನುಂಗಲಾರದ ತುತ್ತಾಗಿದೆ.

ಉಪಚುನಾವಣೆ ಕಣ ರಂಗೇರಿದ್ದು, ಹೊಸಕೋಟೆ ವಿಧಾನಸಭಾ ಕ್ಷೇತ್ರ ಬಿಜೆಪಿಗೆ ಭಾರಿ ಸವಾಲಾಗಿ ಪರಿಣಮಿಸಿದೆ .ಹೊಸಕೋಟೆ ವಿಧಾಸಭಾ ಕ್ಷೇತ್ರ ಉಪಚುನಾವಣೆ ಬಿಜೆಪಿ ಟಿಕೆಟ್ ವಂಚಿತ ಶರತ್ ಬಚ್ಚೇಗೌಡ ಪಕ್ಷೇತರರಾಗಿ ನಾಮಪತ್ರ ಸಲ್ಲಿಸಿರುವುದು ಬಿಜೆಪಿ ಭಾರಿ ಹಿನ್ನಡೆ ಉಂಟುಮಾಡಿದೆ. ಇದರ ಹಿಂದೆಯೇ ಈಗ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರ ಬಿಜೆಪಿ ಸಂಸದ ಬಿ.ಎನ್.ಬಚ್ಚೇಗೌಡ ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲು ಸಜ್ಜಾಗಿದ್ದಾರೆ.

ತಮ್ಮ ಪುತ್ರ ಶರತ್ ಬಚ್ಚೇಗೌಡ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ, ತಮ್ಮ ಬಹುಕಾಲದ ಬದ್ಧ ವೈರಿ ಎಂ.ಟಿ.ಬಿ. ನಾಗರಾಜ್‌ ಗೆ ಟಿಕೆಟ್ ನೀಡಿರುವುದರಿಂದ ಕೆರಳಿರುವ ಬಿ.ಎನ್.ಬಚ್ಚೇಗೌಡ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡುವ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ.

Leave a Reply