Kar : ಸಹಕಾರ ಬ್ಯಾಂಕಗಳಲ್ಲಿ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ – BSY ಘೋಷಣೆ…

ಸಂಕಷ್ಟದಲ್ಲಿರುವ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅನ್ನದಾತರು ಮಾಡಿರುವ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿಎಸ್. ಯಡಿಯೂರಪ್ಪ ಅವರು ಘೊಷಣೆ ಮಾಡಿದ್ದಾರೆ.


ಸಹಕಾರಿ ಬ್ಯಾಂಕುಗಳಲ್ಲಿನ ರೈತರ ಸಾಲದ ಬಡ್ಡಿ‌ ಮನ್ನಾ ಮಾಡಲಾಗುವುದು ಎಂದು ಬಿಎಸ್ವೈ ಹೇಳಿದ್ದಾರೆ. ಮಾರ್ಚ್ ಒಳಗೆ ಸಾಲ ಮರುಪಾವತಿಸುವವರಿಗೆ ರಿಯಾಯಿತಿ ಸಹ ನೀಡಲು ಯೋಚಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ರಾಜ್ಯದ ರೈತರು ಬ್ಯಾಂಕುಗಳಲ್ಲಿ ಮಾಡಿದ ಸಾಲದ ಮೇಳೆ ಬಡ್ಡಿ ಮತ್ತು ಸುಸ್ತಿ ಬಡ್ಡಿ ಕಟ್ಟಲಾಗದ ಸಂಕಷ್ಟದ ಪರಿಸ್ಥಿತಿಯಲ್ಲಿದ್ದಾರೆ. ಇಂತಹ ರೈತರಿಗೆ ನೆರವಾಗುವ ನಿಟ್ಟಿನಲ್ಲಿ ಅವರು ಮಾಡಿರುವ ಸಾಮಲದ ಮೇಲಿನ ಬಡ್ಡಿ ಮನ್ನಾ ಮಾಡಲಾಗುತ್ತಿದೆ ಎಂದು ಯಡಿಯೂರಪ್ಪ ತಿಳಿಸಿದರು.

ಇದೇ ವೇಳೆ ಹಾಲು ಉತ್ಪಾದಕರ ಸಹಕಾರ ಸಂಘಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ಪ್ರತಿ ಲೀಟರ್ ಗೆ 20 ಪೈಸೆ ಪ್ರೋತ್ಸಾಹ ಧನ ನೀಡುವ ಕುರಿತು ಬಜೆಟ್ ನಲ್ಲಿ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಹೇಳಿದ್ದಾರೆ