ಸೆ. 7-8 ಕ್ಕೆ ಬೆಂಗಳೂರಿಗೆ ಆಗಮಿಸಲಿರುವ ಮೋದಿ : ನೆರೆ ಪ್ರದೇಶಗಳಿಗೆ ಹೆಚ್ಚಿನ ಅನುದಾನ ನಿರೀಕ್ಷೆ

ಸೆ. 7-8 ಕ್ಕೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸುತ್ತಿದ್ದಾರೆ ಎಂದು ಶಿವಮೊಗ್ಗದಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ.

ಈ ವೇಳೆ ಪ್ರವಾಹ ಪರಿಸ್ಥಿತಿ ಬಗ್ಗೆ ಅವರಿಗೆ ರಾಜಭವನದಲ್ಲಿ ಮನವರಿಕೆ ಮಾಡಿಕೊಡಲು ಚಿಂತಿಸಲಾಗಿದೆ. ಅವರು ಒಪ್ಪಿಗೆ ನೀಡಿದರೆ, ಸಭೆ ನಡೆಸಿ ಮನವರಿಕೆ ಮಾಡಲಾಗುವುದು. ರಾಜ್ಯದಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದ್ದು, ಈ ಬಗ್ಗೆ ಪರಿಹಾರ ನಿರೀಕ್ಷೆಯಂತೆ ದೊರೆಯಲಿದೆ.

ಈಗಾಗಲೇ ಅತಿವೃಷ್ಟಿಯಿಂದ ಹಾನಿಗೊಳಗಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಲಾಗಿದೆ. ಶೀಘ್ರದಲ್ಲೇ ಪರಿಹಾರ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗಕ್ಕೆ ಕೈಗಾರಿಕೆಗಳು ಬರಬೇಕೆಂಬ ನಿಟ್ಟಿನಲ್ಲಿ ಆದಷ್ಟು ಬೇಗ, ವಿಮಾನ ನಿಲ್ದಾಣ ಕಾಮಗಾರಿ ನಡೆಸಲು ಸೂಚಿಸಲಾಗಿದೆ. ಸಾಗರ ತಾಲೂಕಿನ ಕಲ್ಲೊಡ್ಡು ನೀರಾವರಿ ಬಗ್ಗೆ ಏಕೆ ವಿರೋಧವಾಗುತ್ತಿದೆ ತಿಳಿಯುತ್ತಿಲ್ಲ. ಕಲ್ಲೊಡ್ಡು ಯೋಜನೆ ನಿಲ್ಲಿಸುವುದಿಲ್ಲ ಎಂದರು.

ಈ ವೇಳೆ ಡಿ.ಕೆ. ಶಿವಕುಮಾರ್ ಇಡಿ ವಿಚಾರಣೆಗೂ ನಮಗೂ ಸಂಬಂಧವಿಲ್ಲ ಎಂದಿದ್ದಾರೆ.

Leave a Reply