ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತನು ಸ್ಥಳಕ್ಕೆ ಪೊಲೀಸ್ ದಾಳಿ…!

ಮೈಸೂರಿನಲ್ಲಿ ಅನ್ನಭಾಗ್ಯ ಅಕ್ಕಿ ಅಕ್ರಮ ದಾಸ್ತನು ಸ್ಥಳಕ್ಕೆ ಟಿ. ನರಸೀಪುರ ತಹಶೀಲ್ದಾರ್ ಹಾಗೂ ಪೊಲೀಸ್ ಇಲಾಖೆ ಜಂಟಿಯಾಗಿ‌ ದಾಳಿ ಮಾಡಿದ್ದಾರೆ.

ಮೈಸೂರು ಜಿಲ್ಲೆ ಟಿ. ನರಸೀಪುರ ಪಟ್ಟಣದಲ್ಲಿ ಈ ಘಟನೆ ನಡೆದಿದ್ದು, ಅಪಾರ ಪ್ರಮಾಣದ ಅನ್ನಭಾಗ್ಯ ಅಕ್ಕಿ  ಮೂಟೆಗಳನ್ನು ವಶಕ್ಕೆ ಪಡೆಯಲಾಗಿದೆ. ಮನೆಯೊಂದರಲ್ಲಿ ಶೇಖರಿಸಿಟ್ಟಿದ್ದ 18 ಅಕ್ಕಿ ಮೂಟೆಗಳು, ಅನ್ನಭಾಗ್ಯ ಯೋಜನೆಯ ಅಕ್ಕಿ, ಬೇಳೆ, ಶಾಲಾ ಮಕ್ಕಳ ಕ್ಷೀರ ಭಾಗ್ಯ ಯೋಜನೆಯ ಹಾಲಿನ ಪ್ಯಾಕೆಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ.

ಈ ಎಲ್ಲಾ ಪದಾರ್ಥಗಳನ್ನು ಜಬೀವುಲ್ಲಾ ಎಂಬವರ ಮನೆಯಲ್ಲಿ ಅಕ್ರಮವಾಗಿ ದಾಸ್ತಾನು ಮಾಡಲಾಗಿತ್ತು. ದಾಳಿಯ ಮುನ್ಸೂಚನೆ ಅರಿತ ದಂಧೆಕೋರರು ಸ್ಥಳದಿಂದ ಕಾಲ್ಕಿತ್ತಿದ್ದಾರೆ.

ಟಿ.ನರಸೀಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights