ಕರಾವಳಿಯ ಮೂರು ಜಿಲ್ಲೆಗಳಲ್ಲಿ ಉತ್ತಮ ಮಳೆ : 48 ಗಂಟೆಯಲ್ಲಿ ಅಧಿಕ ಮಳೆ ಸಾಧ್ಯತೆ

ರಾಜ್ಯದಲ್ಲಿ ಮುಂದಿನ ಎರಡರಿಂದ ಮೂರು ದಿನ ರಾಜ್ಯದ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮೇಲ್ಮೈ ಸುಳಿಗಾಳಿಯ ಪ್ರಭಾವದಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಕಳೆದ ನಾಲ್ಕು ದಿನಗಳಿಂದ ಉತ್ತಮ ಮಳೆಯಾಗುತ್ತಿತ್ತು.

ಇದೀಗ ಉತ್ತರ ಒಳನಾಡು ಮತ್ತು ಕರಾವಳಿ ಭಾಗಕ್ಕೆ ಮಳೆ ವ್ಯಾಪ್ತಿಸಿದ್ದು, ಎರಡು ದಿನ ಒಳನಾಡು ಜಿಲ್ಲೆಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗಲಿದೆ. ಆ.25 ರವರೆಗೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ 65 ರಿಂದ 115 ಮಿ.ಮೀ.ವರೆಗೆ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಉತ್ತರ ಒಳನಾಡಿನ ಬೀದರ್‌, ಕಲಬುರಗಿ, ವಿಜಯಪುರ, ರಾಯಚೂರು, ಯಾದಗಿರಿ, ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ, ದಕ್ಷಿಣ ಒಳನಾಡು ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ, ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಮೈಸೂರು, ಮಂಡ್ಯ, ತುಮಕೂರು, ಚಾಮರಾಜನಗರ, ಮಲೆನಾಡು ಜಿಲ್ಲೆಗಳಾದ, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಮುಂದಿನ 48 ಗಂಟೆಯಲ್ಲಿ 65 ರಿಂದ 115 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಎಚ್ಚರಿಕೆ ನೀಡಲಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights