ಕೊಡಗು ಜಿಲ್ಲೆಯಾದ್ಯಂತ ಅಧಿಕ ಮಳೆ : ಆತಂಕದಲ್ಲಿ ಜನ ಜೀವನ

ಕೊಡಗು ಜಿಲ್ಲೆಯಾದ್ಯಂತ ಹೆಚ್ಚು ಮಳೆಯಾಗುತ್ತಿದ್ದು, ಹಾರಂಗಿ ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾಗಿರುವುದರಿಂದ ದಿನಾಂಕ:04-09-2019 ರ ರಾತ್ರಿಯಿಂದ ಹಾರಂಗಿ ಜಲಾಶಯದಿಂದ 15000 ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.

ಜಲಾಶಯಕ್ಕೆ ನೀರಿನ ಒಳ ಹರಿವು ಹೆಚ್ಚಾದಲ್ಲಿ ಇನ್ನೂ ಹೆಚ್ಚು ನೀರನ್ನು ಜಲಾಶಯದಿಂದ ಹೊರ ಬಿಡುವ ಸಾಧ್ಯತೆ ಇರುತ್ತದೆ. ಜನ ಆತಂಕದಲ್ಲೇ ದಿನ ದೂಡುತ್ತಿದ್ದಾರೆ.

ಅಲ್ಲದೆ ಕಾವೇರಿ ಜಲಾನಯನ ಪ್ರದೇಶಗಳಲ್ಲೂ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಕಾವೇರಿ ಹೊಳೆಯಲ್ಲೂ ನೀರಿನ ಮಟ್ಟ ಏರಿಕೆಯಾಗುತ್ತಿದ್ದು, ಕುಶಾಲನಗರ ಸೇರಿದಂತೆ ಕಾವೇರಿ ನದಿ ತಟದಲ್ಲಿರುವ ಜನರು ಜಾಗರೂಕತೆಯಿಂದ ಇರಲು ಜಿಲ್ಲಾಡಳಿತ ಮನವಿ ಮಾಡುತ್ತದೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights