ಡಿಕೆಶಿಗೆ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ.. ಇದಕ್ಕೆಲ್ಲ ನಾನು ಹೊಣೆಯ..?

ಡಿಕೆಶಿಗೆ ದರೋಡೆ ಮಾಡೋದಕ್ಕೆ ನಾವು ಹೇಳಿದ್ವಾ.. ಇದಕ್ಕೆಲ್ಲ ನಾನು ಹೊಣೆಯ..? ಇದು ಮಾಜಿ ಸಿಎಂ ಕುಮಾರಸ್ವಾಮಿ ಬಾಯಿಂದ ಬಂದ ಮಾತುಗಳಂತೆ. ಮಂಡ್ಯದಲ್ಲಿ ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ಹೊಸ ಬಾಂಬ್ ಸಿಡಿಸಿದ್ದಾರೆ.

ಮೈಸೂರಿನ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಹೀಗೆಂದು ಹೇಳಿದ್ರಂತೆ ಎಚ್ಡಿಕೆ. ಡಿಕೆಶಿ ಪರ ಹೋರಾಟದ ಸಭೆಗೆ ಹೋಗಲಿಲ್ಲ ಎಂದು ದೂಷಣೆ ಮಾಡ್ತಿದ್ದಾರೆ. ಇಂತಹ ದರೋಡೆ ಮಾಡೋದಕ್ಕೆ ಹೇಳಿದ್ವ ನಾವು. ದರೋಡೆ ಮಾಡಿ ಸಾರ್ವಜನಿಕವಾಗಿ ಹಂಚುತ್ತಿದ್ದಾರಾ..? ಇದಕ್ಕೆ ನಾನು ಹೊಣೆನಾ..? ನಾನು ಸಭೆಗೆ ಯಾಕೆ ಹೋಗಬೇಕಿತ್ತು. ಎಂದು ಸಭೆಯಲ್ಲಿ ಮಾತನಾಡಿದ್ದಾಂತೆ ಎಚ್ಡಿಕೆ.

ಇದರ ಬಗ್ಗೆ ಸತ್ಯ ನನಗೆ ಗೊತ್ತಿಲ್ಲ. ಸತ್ಯಗೊತ್ತಿಲ್ಲದೆ ನಾನು ಮಾತನಾಡೋದು ತಪ್ಪು ಎಂದ ಚಲುವರಾಯಸ್ವಾಮಿ ಹೇಳಿದ್ದಾರೆ. ಗಂಭೀರ ಆರೋಪ ಮಾಡಿ ಯಾರೋ ಹೇಳ್ತಿದ್ದಾರೆಂದು ಜಾರಿಗೊಂಡರು. ಎಚ್ಡಿಕೆ ಸಿಎಂ ಪಟ್ಟ ಉಳಿಸಲು ಎಲ್ಲರನ್ನೂ ಹೆದುರಾಕಿಕೊಂಡ್ರು.

ಇವತ್ತು ಡಿಕೆಶಿ ಜೊತೆಯಲ್ಲಿ ಕುಮಾರಸ್ವಾಮಿ ನಿಲ್ಲಲಿಲ್ಲ. ಕುಮಾರಸ್ವಾಮಿ ಅವ್ರಿಗೆ ಇಂತ ಕಷ್ಟ ಬಂದಿದ್ರೆ ಡಿಕೆಶಿ ಸ್ಟೇಷನ್ ಹತ್ತಿರನಾ ಕೂರುತ್ತಿದ್ರು. ಆದ್ರೆ ಡಿಕೆಶಿಗೆ ಮಾನಸಿಕವಾಗಿ ಧೈರ್ಯತುಂಬ ಬಹುತಿತ್ತು. ಒಕ್ಕಲಿಗ ಸಂಘಟನೆಗಳಿಂದ ನಡೆದ ಹೋರಾಟಕ್ಕೂ ಸಪೋರ್ಟ್ ಮಾಡಲಿಲ್ಲ. ಅದನ್ನು ಬಿಟ್ಟು ಅಂದು ಚನ್ನಪಟ್ಟಣದಲ್ಲಿ ಕಾರ್ಯಕ್ರಮಕ ಹಾಕಿಕೊಂಡ್ರು.

ಉದ್ದೇಶ ಪೂರ್ವಕವಾಗಿ ಚನ್ನಪಟ್ಟಣಕ್ಕೆ ಹೋಗಿದ್ರಾ..? ಹೋರಾಟಕ್ಕೆ ಹೋಗುವ ಜನರನ್ನ ಅವೈಡ್ ನಾಡೋದಕ್ಕೆ ಹೋಗಿದ್ರಾ..? ಡಿಕೆಶಿ ಪರ ಒಕ್ಕಲಿಗ ಸಮುದಾಯದ ಹೋರಾಟಕ್ಕೆ ಗೈರಾದ ಎಚ್ಡಿಕೆಗೆ ಚಲುವರಾಯಸ್ವಾಮಿ ಪ್ರಶ್ನೆ ಸಿದ್ದಾರೆ. ಡಿ.ಕೆ.ಶಿವಕುಮಾರ್ ಮಾಡಬಾರದ ಕ್ರೈಮ್ ಮಾಡಿಲ್ಲ. ಬಿಜೆಪಿ ಹೊತೆ ಜೆಡಿಎಸ್ ಹೊಂದಾಣಿಕೆಗೆ ಮಾಡಿಕೊಳ್ಳಲು ಡಿಕೆಶಿ ಬಿಡಲಿಲ್ಲ.

ಕಾಂಗ್ರೆಸ್ ರಕ್ಷಣೆ ಮಾಡಿಕೊಳ್ಳಲು ನಿಂತಿದ್ರು. ಈ ಸಿಟ್ಟು ಡಿಕೆಶಿ ಬಿಜೆಪಿ ನಾಯಕರಿಗೆ ಇತ್ತು. ಹಿಂದೆ ದೇವೇಗೌಡ್ರು ಕುಟುಂಬಕ್ಕೂ ಡಿಕೆಶಿಗೂ ವೈಮನಸ್ಸಿತ್ತು. ಹೀಗೆ ಇಲ್ಲದೆಲ್ಲ ಚರ್ಚೆ ನಡೆಯುತ್ತಿದೆ. ಒಂದಲ್ಲೊಂದು ದಿನ ಸತ್ಯ ಹೊರಗಡೆ ಬರುತ್ತೆ. ಜಾಣ್ಮೆಯಿಂದಲೇ, ಪರೋಕ್ಷವಾಗಿ ಡಿಕೆಶಿ ಬಂಧನಕ್ಕೆ ದೇವೇಗೌಡ್ರ ಕುಟುಂಬ ಕಾರಣ ಎಂದ ಚಲುವರಾಯಸ್ವಾಮಿ ಹೇಳಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights