ನವ ವಧುವಿನಂತೆ ಸಿಂಗಾರಗೊಂಡ ಹಾಸನ : ಹಾಸನಾಂಬ ದೇವಿ ದರ್ಶನಕ್ಕೆ ಕೆಲವೇ ಗಂಟೆಗಳು ಬಾಕಿ…

ನವ ವಧುವಿನಂತೆ ಸಿಂಗಾರಗೊಂಡಿರುವ ಹಾಸನ ನಗರದ ಅಧಿದೇವತೆ ಹಾಸನಾಂಬ ದೇವಿ ದರ್ಶನಕ್ಕೆ ಕೆಲವೇ ಗಂಟೆಗಳು ಬಾಕಿ ಇದ್ದು ಭಕ್ತರು ದೇವಿಯನ್ನು ಕಣ್ತುಂಬಿಕೊಳ್ಳಲು ಕಾಯುತ್ತಿದ್ದಾರೆ.

ಹೌದು..  ವರ್ಷಕ್ಕೊಮ್ಮೆ ಮಾತ್ರ ದರ್ಶನ ಭಾಗ್ಯ ಕರುಣಿಸಲಿರುವ ಹಾಸನಾಂಬೆ ದೇವಿ, ಈ ಬಾರಿ ಅಕ್ಟೋಬರ್ 17 ರಿಂದ 29 ರವರೆಗೆ ದೇವಸ್ಥಾನದ ಬಾಗಿಲು ತೆರೆಯಲಿದೆ. ಹಾಸನಾಂಬ ದೇವಸ್ಥಾನಕ್ಕೆ ಹೊರ ಜಿಲ್ಲೆ ಹಾಗೂ ಹೊರ ರಾಜ್ಯಗಳಿಂದ ಭಕ್ತಸಾಗರ ಹರಿದು ಬರಲಿದೆ.

ಅಶ್ವೀಜ ಮಾಸದ ಮೊದಲ ಗುರುವಾರ ಮಧ್ಯಾಹ್ನ 12.30ಕ್ಕೆ ದೇವಿಯ ಗರ್ಭಗುಡಿ ಬಾಗಿಲು ತೆರೆಯಲಿದೆ.  ಪ್ರತಿದಿನ ಬೆಳಿಗ್ಗೆ 5 ಗಂಟೆಯಿಂದ ಮದ್ಯಾಹ್ನ 1.30 ಹಾಗೂ 3.30 ರಿಂದ ಮುಕ್ತಾಯದವರೆಗೂ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಆದರೆ ಮೊದಲ ಹಾಗೂ ಕೊನೆಯ ದಿನ ಭಕ್ತರಿಗೆ ದೇವಿಯ ದರ್ಶನ ಇರುವುದಿಲ್ಲ. 300 ಹಾಗೂ 1000 ರೂಪಾಯಿಗಳ ಟಿಕೆಟ್ ಸೌಲಭ್ಯದ ಮೂಲಕ ಶೀಘ್ರ ದರ್ಶನ ವ್ಯವಸ್ಥೆ ಮಾಡಿರುವ ಜಿಲ್ಲಾಡಳಿತ, ಭಕ್ತರಿಗೆ ಅಗತ್ಯವಿರುವ ಎಲ್ಲಾ ರೀತಿಯ ಮೂಲಭೂತ ಸೌಕರ್ಯ ಕಲ್ಪಿಸಿದೆ.

ದೇವಾಲಯದ ಒಳಗೆ ಹಾಗೂ ಸುತ್ತಮುತ್ತ ಸಿಸಿ ಟಿವಿ ಕಣ್ಗಾವಲಿದ್ದು,  ದೇವಿಯ ಸುಗಮ ದರ್ಶನಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ನವ ವಧುವಿನಂತೆ ಸಿಂಗಾರಗೊಂಡಿರುವ ಹಾಸನ ನಗರದಲ್ಲಿ ಹಬ್ಬದ ವಾತಾವರಣ ನಿರ್ಮಾಣ ನಿರ್ಮಾಣವಾಗಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights