ನಾಳೆ ಬೆಳಿಗ್ಗೆ 17 ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಗೆ ನಿರ್ಧಾರ….!

ನಮಗೂ ಬಿಜೆಪಿಗೂ ಸಂಬಂಧವಿಲ್ಲ. ನಾವು ತೆಗೆದುಕೊಂಡ ನಿರ್ಧಾರ ಸ್ವಯಿಚ್ಚೆಯಿಂದ ತೆಗೆದುಕೊಂಡ ನಿರ್ಧಾರ ಎಂದು 17 ಶಾಸಕರು ರಾಜೀನಾಮೆ ನೀಡುವ ಮೂಲಕ ರಾಜ್ಯದಲ್ಲಿ ಮೈತ್ರಿ ಸರ್ಕಾರವನ್ನು ಬೀಳಿಸಿದ್ದರು. ಆದರೆ ಇಂದು ಸುಪ್ರೀಂಕೋರ್ಟ್ ತೀರ್ಪು ಬಳಿಕ ಅನರ್ಹ ಶಾಸಕರು ಬಿಜೆಪಿ ಸೇರಲು ನಿರ್ಧರಿಸಿದ್ದಾರೆ.

ಹೌದು… ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಗೆ ಇಂದು ಸುಂಪ್ರೀಕೋರ್ಟ್ ತೀರ್ಪು ನೀಡಿದ ಬಳಿಕ ಅನರ್ಹ ಶಾಸಕರು ಬಿಗ್ ಶಾಕ್ ವೊಂದನ್ನ ನೀಡಿದ್ದಾರೆ. ನಾವೆಲ್ಲರೂ ಬಿಜೆಪಿಗೆ ಸೇರ್ಪಡೆಯಾಗುತ್ತೇವೆ ಎನ್ನುವ ವಿಚಾರವನ್ನು ಅನರ್ಹ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಬಿ.ಸಿ ಪಾಟೀಲ್, ರಮೇಶ್ ಜಾರಕಿಹೊಳಿ ಮಾಧ್ಯಮದ ಮುಂದೆ ಹೇಳಿದ್ದಾರೆ.

ನಿಜವಾಗಿಯೂ ಅನರ್ಹ ಶಾಸಕರು ಮೈತ್ರಿ ಸರ್ಕಾರದಿಂದ ಬೇಸತ್ತು ಹೊರಬಂದಿದ್ದೇ ಆಗಿದ್ದರೆ, ಬಿಜೆಪಿ ಕುದರೆ ವ್ಯಾಪಾರ ಮಾಡೇ ಇಲ್ಲ ಅನ್ನುವ ವಿಚಾರ ನಿಜವಾಗಿದ್ದರೆ, ಉಪಚುನಾವಣೆಯಲ್ಲಿ ಅನರ್ಹ ಶಾಸಕರು ಪಕ್ಷೇತರ ಅಭ್ಯಾರ್ಥಿಗಳಾಗಿ ಸ್ಪರ್ಧಿಸಬಹುದಾಗಿತ್ತು. ಆದರೆ ಅನರ್ಹ ಶಾಸಕರು ಬಿಜೆಪಿ ಸೇರ್ಪಡೆಗೆ ಮುಂದಾಗಿರುವುದು ನಂತರ ಉಪಚುನಾವಣೆಯಲ್ಲಿ ಸ್ಪರ್ಧಿಸಲು ನಿರ್ಧರಿಸಿರುವುದು ಅನುಮಾನಕ್ಕೆ ಗುರಿ ಮಾಡಿದೆ.

ನಾಳೆ ಬೆಳಿಗ್ಗೆ 10.30ಕ್ಕೆ ಬೆಂಗಳೂರು ಕಚೇರಿಯಲ್ಲಿ 17 ಶಾಸಕರು ಬಿಜೆಪಿ ಸೇರ್ಪಡೆಗೆ ನಿರ್ಧಾರ ಮಾಡಿದ್ದಾರೆ. ಜೊತೆಗೆ ಬಿಜೆಪಿಯಲ್ಲಿ ತಮ್ಮ ಕ್ಷೇತ್ರಗಳಲ್ಲಿ ಸ್ಪರ್ಧಿಸಲು ಅವಕಾಶ ಸಿಗುತ್ತಾ ಅನ್ನೋ ಗೊಂದಲದಲ್ಲಿದ್ದಾರೆ. ಹೀಗಾಗಿ ಇಷ್ಟು ದಿನ ಸಿಎಂ ಯಡಿಯೂರಪ್ಪ ಅವರ ಸಂಪರ್ಕದಲ್ಲಿರುತ್ತಿದ್ದ ಅನರ್ಹ ಶಾಸಕರು ಸದ್ಯ ಆರ್ ಎಸ್ ಎಸ್ ಮನ ಗೆಲ್ಲಲು ಮುಂದಾಗಿದ್ದಾರೆ. ಕೋರ್ ಕಮಿಟಿಗೂ ಮುನ್ನ ಬಿ.ಎಲ್ ಸಂತೋಷ್ ಮನವೊಲಿಸಲು ಪ್ಲ್ಯಾನ್ ಮಾಡಿದ್ದಾರೆ. ತಮ್ಮ ಟಿಕೇಟ್ ಕಾಯ್ದಿರಿಸಲು ಸಂತೋಷ್ ಭೇಟಿ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಮಸ್ಕಿ ರಾಜರಾಜೇಶ್ವರಿ ನಗರ ಎರಡು ಕ್ಷೇತ್ರಗಳನ್ನು ಬಿಟ್ಟು ಒಟ್ಟು 15 ಕ್ಷೇತ್ರಗಳಲ್ಲಿ ಡಿಸೆಂಬರ್ 5 ರಂದು ಉಪಚುನಾವಣೆ ನಡೆಯುತ್ತದೆ.

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights