ಮಧ್ಯಂತರ ಚುನಾವಣೆಗೆ ಸಿದ್ದು ಸಜ್ಜು : ದಳಪತಿಗಳಿಗೆ ಸಿದ್ಧರಾಮಯ್ಯ ಗುದ್ದು

ದೋಸ್ತಿಗಳ ನಡುವೆ ನೇರಾನೇರ ಗುದ್ದಾಟ ನಡೆಯುತ್ತಿದ್ದಂತೆ ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ಯುದ್ಧಕ್ಕೆ ಸಜ್ಜುಗೊಳ್ಳುತ್ತಿದ್ದಾರೆ.

ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಧ್ಯಂತರ ಚುನಾವಣೆ ಬಂದರೆ ಎದುರಿಸಲು ಸಜ್ಜಾಗುವಂತೆ ಪಕ್ಷದ ಮುಖಂಡರಿಗೆ ಸೂಚನೆ ನೀಡಿದ್ದಾರೆ.

ಹೌದು… ಮೈಸೂರಿನ ತಮ್ಮ ನಿವಾಸದಲ್ಲಿ ಚಾಮುಂಡೇಶ್ವರಿ ಹಾಗೂ ವರುಣ ಕ್ಷೇತ್ರದ ಕಾಂಗ್ರೆಸ್ಮುಖಂಡರ ಜೊತೆ ಸುಮಾರು ಅರ್ಧ ಗಂಟೆಗೂ ಹೆಚ್ಚು ಕಾಲ ಮಾತುಕತೆ ನಡೆಸಿದರು. ಇಂದಿನ ರಾಜಕೀಯ ಬೆಳವಣಿಗೆ ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಮಧ್ಯಂತರ ಚುನಾವಣೆ ಎದುರಾಗಬಹುದು ಎಂದ ಅವರು, ಹಿನ್ನೆಲೆಯಲ್ಲಿ ಪಕ್ಷ ಸಂಘಟನೆಗೆ ಹೆಚ್ಚು ಗಮನ ನೀಡಿ ಎಂದು ಸಲಹೆ ನೀಡಿದರು.

ಈಗಾಗಲೇ ಕಾಂಗ್ರೆಸ್‌- ಜೆಡಿಎಸ್ಮೈತ್ರಿ ಸರ್ಕಾರ ಪತನದ ಬಳಿಕ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರ್ಕಾರದಲ್ಲಿ ಸಚಿವ ಸಂಪುಟ ಹಂಚಿಕೆಯ ಬೆನ್ನಲ್ಲೇ ಭಿನ್ನಾಭಿಪ್ರಾಯ ಕಂಡು ಬಂದಿದೆ. ಹಿನ್ನೆಲೆಯಲ್ಲಿ ಯಾವಾಗ ಬೇಕಾದರೂ ಚುನಾವಣೆ ಬರಬಹುದು. ಇದನ್ನೇ ರಾಜಕೀಯ ವಿಶ್ಲೇಷಕರೂ ತಮ್ಮ ಇಂಗಿತ ವ್ಯಕ್ತಪಡಿಸುತ್ತಿದ್ದಾರೆ. ಆದ್ದರಿಂದ ಪಕ್ಷದ ಮುಖಂಡರು ಸಂಘಟನೆಗೆ ಹೆಚ್ಚು ಒತ್ತು ನೀಡಬೇಕೆಂದು ಅವರು ತಿಳಿಸಿದರು.

ಹೀಗಾಗಿ ರಾಜ ರಾಜಕಾರಣದಲ್ಲಿ ಮಧ್ಯಂತರ ಚುನಾವಣೆ ನಡೆಸುವ ನಿಟ್ಟಿನಲ್ಲಿ ತಯಾರಿ ನಡೆಸಲಾಗುತ್ತಿದ್ದು, ಪ್ರತಿಪಕ್ಷಗಳು ಒಪ್ಪಿದರೆ ಚುನಾವಣೆ ನಡೆಯುವ ಸಾಧ್ಯತೆ ಇದೆ. 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights