ಮುಂದಿನ ಎರಡು ದಿನ ವ್ಯಾಪಕ ಮಳೆಯಾಗುವ ಸಾಧ್ಯತೆ – ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ವ್ಯಾಪಕವಾದ ಮಳೆಯಾಗುವ ಸಾಧ್ಯತೆ ಇದ್ದು, ಬರುವ ದಿನಗಳಲ್ಲಿ ರಾಜ್ಯದಲ್ಲಿ ಮಳೆ ಪ್ರಮಾಣ ಕಡಿಮೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆ ಸ್ವಲ್ಪ ಪ್ರಮಾಣದಲ್ಲಿ ಕಡಿಮೆಯಾಗಿದ್ದರೂ ಮೋಡ ಕವಿದ ವಾತಾವರಣ ಮುಂದುವರೆದಿದೆ. ಇನ್ನು ಎರಡು ದಿನ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ವ್ಯಾಪಕ ಪ್ರಮಾಣದಲ್ಲಿ ಮಳೆಯಾಗಲಿದೆ.

ಉಳಿದಂತೆ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಸಾಧಾರಣ ಪ್ರಮಾಣದಲ್ಲಿ ವ್ಯಾಪಕ ಮಳೆಯಾಗಲಿದೆ. ಸದ್ಯಕ್ಕೆ ಮೋಡ ಕವಿದ ವಾತಾವರಣವಿದ್ದರೂ ಬರುವ ದಿನಗಳಲ್ಲಿ ಮಳೆಯ ಮಾರುತಗಳ ಸಂಖ್ಯೆ ಕಡಿಮೆಯಾಗಲಿದ್ದು, ಮಳೆಯ ಪ್ರಮಾಣವೂ ತಗ್ಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights