ರೌಡಿ ಶೀಟರ್‌ಗಳ‌ ಮನೆಮೇಲೆ ದಾಳಿ : ಅಪಾರ ಪ್ರಮಾಣದ ಮಾರಕಾಸ್ತ್ರಗಳು ಪತ್ತೆ

ವಾಣಿಜ್ಯ ನಗರದಲ್ಲಿ ಹೆಚ್ಚುತ್ತಿರುವ ಅಪರಾಧ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ಪೊಲೀಸರು, ಹುಬ್ಬಳ್ಳಿಯ ರೌಡಿ ಶೀಟರ್‌ಗಳ‌ ಮನೆಮೇಲೆ ಪೊಲೀಸರು ದಾಳಿ ಮಾಡಿದ್ದಾರೆ.

ಹೌದು.. ಕೇಶ್ವಾಪುರ, ಬೆಂಡಿಗೇರಿ, ವಿದ್ಯಾನಗರ , ಹಳೇಹುಬ್ಬಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸೇರಿದಂತೆ 30ಕ್ಕೂ ಹೆಚ್ಚು ರೌಡಿಗಳ ಮನೆಗಳಲ್ಲಿಂದು ಪೊಲೀಸರು ಪರಿಶೀಲನೆ ಮಾಡಿದ್ದಾರೆ.

ರೌಡಿಗಳ ಮನೆಯಲ್ಲಿ ಅಪಾರ ಪ್ರಮಾಣದ ಮಾರಕಾಸ್ತ್ರಗಳು ಪತ್ತೆಯಾಗಿದ್ದು, ಅವುಗಳನ್ನು ವಶ ಪಡಿಸಿಕೊಳ್ಳಲಾಗಿದೆ. ಜೊತೆಗೆ ರೌಡಿ ಶೀಟರ್‌ಗಳಾದ ವಿನಾಯಕ ಮಾನೆ, ಮಂಜುನಾಥ ಪೂಜಾರ್, ಆರೀಫ್ ಪಟೇಲ್ ಸೇರಿದಂತೆ ಎಂಟು ಜನರು ವಶಕ್ಕೆ ಪಡೆಯಲಾಗಿದೆ.

ದಾಳಿಯ ವೇಳೆ ಕೊಲೆ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights