ವಿಶ್ವಾಸಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ…!

ಬಹುಮತ ಸಾಬೀತು ಮಾಡುವಂತೆ ಸುಪ್ರೀಂಕೋರ್ಟ್​ ಆದೇಶಿಸಿದ ಬೆನ್ನಲ್ಲೇ ಮಹಾರಾಷ್ಟ್ರದಲ್ಲಿ ಸಾಕಷ್ಟು ರಾಜಕೀಯ ಬೆಳವಣಿಗೆಗಳು ಮತ್ತೆ ಗರಿಗೆದರಿದವು. ಬಹುಮತ ಸಾಬೀತು ಪಡಿಸಲು ಸಾಕಷ್ಟು ಸರ್ಕಸ್​ ಮಾಡಿದ ಬಿಜೆಪಿ ಕಡೆಗೆ ಸೋಲೊಪ್ಪಿಕೊಂಡಿದೆ. ಉಪ ಮುಖ್ಯಮಂತ್ರಿ ಸ್ಥಾನಕ್ಕೆ ಎನ್​ಸಿಪಿ ರೆಬೆಲ್​ ನಾಯಕ ಅಜಿತ್​ ಪವಾರ್​​ ರಾಜೀನಾಮೆ ನೀಡಿದ ಬೆನ್ನಲ್ಲೇ, ಪತ್ರಿಕಾಗೋಷ್ಠಿ ಕರೆದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್​ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಮಹಾರಾಷ್ಟ್ರದಲ್ಲಿ ಮತ್ತೆ ಅಧಿಕಾರ ಚುಕ್ಕಾಣಿ ಹಿಡಿಯುವ ಬಿಜೆಪಿ ಕನಸು ಕನಸಾಗೇ ಉಳಿದಿದೆ.

ಆ ಮೂಲಕ ಮಹಾರಾಷ್ಟ್ರದ ರಾಜಕೀಯ ಬಿಕ್ಕಟ್ಟು ಅಂತಿಮ ಹಂತಕ್ಕೆ ಬಂದು ನಿಂತಿದೆ. ಬುಧವಾರ ಸಂಜೆ 5ಗಂಟೆಯೊಳಗೆ ಬಿಜೆಪಿ-ಎನ್‌ಸಿಪಿ ಸರ್ಕಾರ ವಿಧಾನಸಭೆಯಲ್ಲಿ ಬಹುಮತ ಸಾಬೀತು ಮಾಡಬೇಕು ಎಂದು ಸುಪ್ರೀಂಕೋರ್ಟ್ ಆದೇಶ ನೀಡಿದೆ. ಈ ಮೂಲಕ ಆತುರಾತರವಾಗಿ ರಚಿಸಲ್ಪಟ್ಟ ಸರ್ಕಾರದ ಅಳಿವು-ಉಳಿವು ತೀರ್ಮಾನವಾಗಲಿದೆ. ಆದರೆ ವಿಶ್ವಾಸಮತಯಾಚನೆಗೂ ಮುನ್ನವೇ ಮಹಾರಾಷ್ಟ್ರ ಮುಖ್ಯಮಂತ್ರಿ ಸ್ಥಾನಕ್ಕೆ ದೇವೇಂದ್ರ ಫಡ್ನವೀಸ್ ರಾಜೀನಾಮೆ ನೀಡಿದ್ದಾರೆ.

ಮಹಾರಾಷ್ಟ್ರ ಸರ್ಕಾರ ರಚನೆಯು ಅಸಾಂವಿಧಾನಿಕ ಎಂದು ಎನ್‌ಸಿಪಿ-ಕಾಂಗ್ರೆಸ್-ಶಿವಸೇನೆ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದವು. ಶನಿವಾರ ದೇವೇಂದ್ರ ಫಡ್ನವೀಸ್ ಮುಖ್ಯಮಂತ್ರಿಯಾಗಿ, ಅಜಿತ್ ಪವಾರ್ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕಾರ ಮಾಡಿದ್ದರು. ಶಿವಸೇನೆ, ಕಾಂಗ್ರೆಸ್ ಮತ್ತು ಎನ್‌ಸಿಪಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್. ವಿ. ರಮಣ ನೇತೃತ್ವದ ತ್ರಿ ಸದಸ್ಯ ಪೀಠ ನವೆಂಬರ್ 27ರಂದು ಸಂಜೆ 5 ಗಂಟೆಯೊಳಗೆ ಸರ್ಕಾರ ಬಹುಮತ ಸಾಬೀತು ಮಾಡಬೇಕು ಎಂದು ಆದೇಶ ನೀಡಿದೆ.

ಶನಿವಾರ ಮುಂಜಾನೆ ದಿಢೀರ್ ಆಗಿ ಮಹಾರಾಷ್ಟ್ರದಲ್ಲಿ ಸರ್ಕಾರವನ್ನು ರಚನೆ ಮಾಡಲಾಗಿತ್ತು. ಬಿಜೆಪಿ ಸದನದಲ್ಲಿ 105 ಸದಸ್ಯ ಬಲ ಹೊಂದಿದೆ. 6 ಪಕ್ಷೇತರರು ಬಿಜೆಪಿಗೆ ಬೆಂಬಲ ನೀಡಿದ್ದಾರೆ. ಎನ್‌ಸಿಪಿಯ ಎಷ್ಟು ಶಾಸಕರು ಬೆಂಬಲ ನೀಡಲಿದ್ದಾರೆ? ಎಂದು ಕಾದು ನೋಡಬೇಕಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights