ಸರ್ಕಾರಿ ಬಸ್ ಹಾಗೂ ಖಾಸಗಿ ಬಸ್ ನಡುವೆ ಮುಖಾಮುಖಿ ಡಿಕ್ಕಿ – ಬಸ್ ಚಾಲಕ ಸ್ಥಳದಲ್ಲೇ ಸಾವು

ಸರ್ಕಾರಿ ಬಸ್ ಹಾಗೂ ಖಾಸಗಿ ಬಸ್ ಮುಖಾಮುಖಿಯಾಗಿ ಡಿಕ್ಕಿಯಾದ ಪರಿಣಾಮ ಸರ್ಕಾರಿ ಬಸ್ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರೋ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಕಡ್ಲೂರು ಸಮೀಪದ ಪುಂಡನಹಳ್ಳಿಯಲ್ಲಿ ನಡೆದಿದೆ.

ಮೃತ ಚಾಲಕನನ್ನ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಗದ್ದಿಗೆರೆಯ ಪುಟ್ಟಸ್ವಾಮಿ ಎಂದು ಗುರುತಿಸಲಾಗಿದೆ. ಮೈಸೂರಿನಿಂದ ಹೊಸಪೇಟೆಗೆ ಹೋಗ್ತಿದ್ದ ಸರ್ಕಾರಿ ಬಸ್ ಶಿವಮೊಗ್ಗದಿಂದ ಬೆಂಗಳೂರಿಗೆ ಹೋಗ್ತಿದ್ದ ಎಸ್.ಆರ್.ಎಸ್ ಗ್ರೂಪಿನ ಖಾಸಗಿ ಬಸ್ ಮುಖಾಮುಖ ಡಿಕ್ಕಿಯಾಗಿ ಈ ಅವಘಡ ಸಂಭವಿಸಿದೆ.

ಬೀರೂರು ಸಮೀಪ ಸಾಧಾರಣ ಮಳೆಯಾಗ್ತಿದ್ರಿಂದ ವೇಗವಾಗಿದ್ದ ಖಾಸಗಿ ಬಸ್ಸಿನ ಬ್ರೇಕ್ ಸರಿಯಾಗಿ ಅಪ್ಲೇ ಆಗದೆ, ಗಾಡಿ ಕಂಟ್ರೋಲ್ ಸಿಗದ ಕಾರಣ ಈ ಅಪಘಾತ ಸಂಭವಿಸಿದೆ ಅಂತಾರೆ ಬಸ್ಸಿನ ಪ್ರಯಾಣಿಕರು. ಬಸ್ಸಿನಲ್ಲಿ ಸುಮಾರು 35 ಜನ ಪ್ರಯಾಣಿಸುತ್ತಿದ್ದು, 20ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಬೀರೂರು, ಕಡೂರು ಹಾಗೂ ತರೀಕೆರೆ ಆಸ್ಪತ್ರೆಗೆ ದಾಖಲಿಸಲಾಗಿದೆ. ತಲೆಗೆ ತೀವ್ರ ಪೆಟ್ಟಾದವರನ್ನ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ತರೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights