ಹಾಸ್ಟೆಲ್ನಲ್ಲಿ ಕಳಪೆ ಆಹಾರ ವಿತರಣೆ ಆರೋಪ : ಮೈಸೂರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕಳಪೆ ಆಹಾರ ವಿತರಣೆ ಮಾಡಲಾಗುತ್ತಿದೆ ಎಂದು ಆರೋಪಿಸಿ ವಿದ್ಯಾರ್ಥಿಗಳು ಮೈಸೂರು ವಿಶ್ವವಿದ್ಯಾನಿಲಯ ಮುಂಭಾಗ ಬೃಹತ್ ಪ್ರತಿಭಟನೆ ನಡೆಸಿದ್ದಾರೆ.

ತಿನ್ನೋ ಊಟದಲ್ಲಿ ಹುಳು ಕಾಣಿಸಿಕೊಂಡಿದೆ. ಮೂಲಭೂತ ಸೌಕರ್ಯಗಳಿಲ್ಲ ಎಂದು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಡಿಗೆ ಪಾತ್ರೆಗಳನ್ನು ಮುಂದಿಟ್ಟು, ತರಗತಿಗಳನ್ನ ಬಹಿಷ್ಕರಿಸಿ ಕುಲಪತಿಗಳ ವಿರುದ್ದ ವಿದ್ಯಾರ್ಥಿಗಳು ಘೋಷಣೆ ಕೂಗುತ್ತಿದ್ದಾರೆ.

ಅಡುಗೆ ಸಿಬ್ಬಂದಿಗಳಿಗೆ ಎಷ್ಟೇ ಹೇಳಿದರೂ ಪ್ರಯೋಜನವಾಘಿಲ್ಲ. ತಿನ್ನೋ ಆಹಾರದಲ್ಲಿ ಹುಳುಗಳಿರುತ್ತವೆ. ಸರಿಯಾಗಿ ಆಹಾರ ಒದಗಿಸುವುದಿಲ್ಲ ಎಂದು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳಿಂದ ಪ್ರತಿಭಟನೆ ಮಾಡಲಾಗುತ್ತಿದೆ.

 

 

 

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love

Leave a Reply

Your email address will not be published.

Verified by MonsterInsights