ಗಡಿಯಲ್ಲಿ ನುಡಿ ಜಾತ್ರೆ : 14 ನೇ ಕೊಡಗು ಜಿಲ್ಲಾ ಸಾಹಿತ್ಯ ಸಮ್ಮೇಳನ

ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ಹಿನ್ನೆಲೆ 14 ನೇ ಕೊಡಗು ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸೋಮವಾರಪೇಟೆ ತಾಲ್ಲೂಕಿನ ನಿಡ್ತ ಗ್ರಾಮದಲ್ಲಿ ನಡೆಯುತ್ತಿದೆ.

ಸಮ್ಮೇಳನದ ಸರ್ವಾಧ್ಯಕ್ಷ ಸಾಹಿತಿ ನಾಗೇಶ್ ಕಾಲೂರು ಅವರನ್ನು ಅದ್ಧೂರಿ ಮೆರವಣಿಗೆ ಮೂಲಕ ಸಮ್ಮೇಳನದ ವೇದಿಕೆಗೆ ಕರೆತರಲಾಯಿತು. ಮೆರವಣಿಗೆಯಲ್ಲಿ ಸಾವಿರಾರು ವಿದ್ಯಾರ್ಥಿನಿಯರು, ಮಹಿಳೆಯರು ಪೂರ್ಣ ಕುಂಭ ಕಳಶ ಹೊತ್ತು ಸಾಗಿದ್ದು ಮೆರವಣಿಗೆಗೆ ಮೆರಗು ನೀಡಿತ್ತು.

ಇನ್ನು ನೂರಾರು ವಿದ್ಯಾರ್ಥಿಗಳು 500 ಮೀಟರ್ ಉದ್ದ ಕನ್ನಡ ಧ್ವಜ ಹಿಡಿದು ಮೆರವಣಿಗೆಯಲ್ಲಿ ಸಾಗಿದ್ದು ವಿಶೇಷವಾಗಿತ್ತು. ಜೊತೆಗೆ ಡೊಳ್ಳು ಕುಣಿತ, ವೀರಗಾಸೆ ಕುಣಿತ ಮತ್ತು ಕೊಡವ ನೃತ್ಯಗಳು ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಸಮ್ಮೇಳನದ ಮೆರವಣಿಗೆಯ ಅಂದ ಹೆಚ್ಚಿಸಿದವು.