ಆರೋಗ್ಯದಲ್ಲಿ ಏರುಪೇರು: ಮತ್ತೆ ಆಸ್ಪತ್ರೆಗೆ ದಾಖಲಾದ ಗೃಹಮಂತ್ರಿ ಅಮಿತ್‌ ಶಾ

ಕೊರೊನಾ ಸೋಂಕಿನಿಂದ ಗುಣಮುಖರಾಗಿ ಕಳೆದ ವಾರ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದ ಗೃಹಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಯಾಸ ಮತ್ತು ದೇಹದಲ್ಲಿ ನೋವು ಕಾಣಿಸಿಕೊಂಡ ಪರಿಣಾಮ ಅವರು ದೆಹಲಿಯ ಏಮ್ಸ್ ಆಸ್ಪತ್ರೆಗೆ ಇಂದು ಬೆಳಿಗ್ಗೆ ದಾಖಲಾಗಿದ್ದಾರೆ.

55 ವರ್ಷದ ಅಮಿತ್‌ ಶಾ ಅವರಿಗೆ ಆಗಸ್ಟ್ 2ರಂದು ಕೊರೊನಾ ವೈರಸ್‌ ಪಾಸಿಟಿವ್ ಬಂದಿತ್ತು. ಹಾಗಾಗಿ ಗುರುಗ್ರಾಮ್ ಬಳಿಯ ಮೆಡೆಂತಾ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದು, ಆಗಸ್ಟ್ 14 ರಂದು ಬಿಡುಗಡೆಯಾಗಿದ್ದರು. ತಮ್ಮ ವೈದ್ಯರ ಸಲಹೆಯ ಮೇರೆಗೆ ಮನೆಯಿಂದಲೇ ಕೆಲಸ ನಿರ್ವಹಿಸುತ್ತಿದ್ದರು.

ಕಳೆದ ಮೂರು ದಿನಗಳಿಂದಲೂ ಅವರು ದೇಹದ ನೋವು ಮತ್ತು ಆಯಾಸದಿಂದ ಬಳಲುತ್ತಿದ್ದರು ಎನ್ನಲಾಗಿದೆ. ಹಾಗಾಗಿ ಏಮ್ಸ್ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಅಮಿತ್ ಶಾರವರ ಕೋವಿಡ್ ಪರೀಕ್ಷೆ ಫಲಿತಾಂಶ ನೆಗೆಟಿವ್ ಬಂದಿದೆ. ಅವತು ಆರಾಮಾಗಿದ್ದಾರೆ ಮತ್ತು ಆಸ್ಪತ್ರೆಯಿಂದಲೇ ಕೆಲಸ ಮಾಡುತ್ತಾರೆ ಎಂದು ಏಮ್ಸ್‌ನ ಡಾ. ಆರತಿ ವಿಜ್ ತಿಳಿಸಿದ್ದಾರೆ.


ಇದನ್ನೂ ಓದಿ:  PM Cares ನಿಧಿಯಿಂದ NDRFಗೆ ಹಣ ವರ್ಗಾವಣೆ ಮಾಡುವಂತಿಲ್ಲ: ಸುಪ್ರೀಂ ಕೋರ್ಟ್‌

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love
Verified by MonsterInsights