ಡಿಜೆ ಹಳ್ಳಿ ಪ್ರಕರಣದಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ಮೇಲೆ ಕ್ರಮಕೈಗೊಳ್ಳಿ: ಮುಸ್ಲೀಂ ಮುಖಂಡರು

ಡಿಜೆ ಹಳ್ಳಿ – ಕೆಜಿ ಹಳ್ಳಿ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಮಾಯಕರನ್ನು ಬಂಧಿಸದೆ, ಗಲಭೆಯಲ್ಲಿ ನಿಜವಾಗಿಯೂ ಭಾಗಿಯಾಗಿದ್ದವರ ವಿರುದ್ಧ ಕಠಿಣ ಕ್ರಮಕೈಗೊಳ್ಳಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ರನ್ನು ಭೇಟಿ ಮಾಡಿ ಮುಸ್ಲಿಂ ಮುಖಂಡರ ನಿಯೋಗ ಮನವಿ ಮಾಡಿದೆ.

ಗಲಭೆಗೆ ಸಂಬಂಧಿಸಿದಂತೆ ಆರೋಪಿಗಳ ಜೊತೆಯಲ್ಲಿ ಅಮಾಯಕರನ್ನೂ ಬಂಧನಕ್ಕೊಳಪಡಿಸಲಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು. ಗಲಭೆ ಕುರಿತು ಪಾರದರ್ಶಕ ತನಿಖೆ ನಡೆಸಬೇಕು ಎಂದು ನಿಯೋಗವು  ಒತ್ತಾಯಿಸಿದೆ.

ಡಿಜೆ ಹಳ್ಳಿ, ಕೆಜಿ ಹಳ್ಳಿ ಗಲಭೆ ದುರಾದೃಷ್ಟಕರ. ಇದು ಜಾತಿ-ಧರ್ಮದ ಗಲಭೆಯಲ್ಲ. ಘಟನೆ ನಡೆಯದಂತೆ ಪೊಲೀಸರು ತಕ್ಷಣ ಕ್ರಮಕೈಗೊಳ್ಳಲಿಲ್ಲ. ಕ್ರಮ ಕೈಗೊಂಡಿದ್ದರೆ ಗಲಬೆ ತೀವ್ರ ಮಟ್ಟಕ್ಕೆ ಹೋಗುತ್ತಿರಲಿಲ್ಲ ಎಂದು  ವಿಧಾನ ಪರಿಷತ್ತು ಸದಸ್ಯ ಸಿ.ಎಂ.ಇಬ್ರಾಹಿಂ ಹೇಳಿದ್ದಾರೆ.


ಇದನ್ನೂ ಓದಿ: ಡಿಜೆ ಹಳ್ಳಿ ಪ್ರಕರಣ: ಕೊತ್ತಂಬರಿ ತರುವುದು ಅಪರಾಧವೇ? ನೆಟ್ಟಿಗರದ್ದೇಕೆ ಇಷ್ಟೊಂದು ಅಪಹಾಸ್ಯ!

ಸುಳ್ಳು ಸುದ್ದಿಗಳ ವಿರುದ್ಧದ ಹೋರಾಟಕ್ಕೆ ದೇಣಿಗೆ ನೀಡಿ ಬೆಂಬಲಿಸಿ
Spread the love
Verified by MonsterInsights